9:07 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೆರೆ, ಕಾಲುವೆ, ಗುಂಡುತೋಪು ಒತ್ತುವರಿ: ಹೈಕೋರ್ಟ್ ಆದೇಶದಂತೆ ತೆರವಿಗೆ ಆಗ್ರಹಿಸಿ ಪ್ರತಿಭಟನೆ

29/07/2021, 11:04

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಹೈಕೋರ್ಟ್ ಆದೇಶದಂತೆ ತಾಲ್ಲೂಕಿನಾದ್ಯಂತ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ, ಗುಂಡುತೋಪು, ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಸಾಗುವಳಿ ಚೀಟಿ ಅಕ್ರಮವನ್ನು ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ಸಾಮೂಹಿಕ ನಾಯಕತ್ವ ರೈತ ಸಂಘದಿಂದ ತಹಸೀಲ್ದಾರ್ ಕಚೇರಿ ಮುಂದೆ ಹೋರಾಟ ಮಾಡಿ ತಹಸೀಲ್ದಾರ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಸಾಮೂಹಿಕ ನಾಯಕತ್ವ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಸರ್ಕಾರಿ ಗುಂಡುತೋಪು, ಸ.ನಂ. 149/2 ರ ಪೆಟ್ರೋಲ್‍ ಬಂಕ್ ಮಾಲೀಕರು ನ್ಯಾಯಾಲಯದಿಂದ ತಂದಿರುವ ತಡೆಯಾಜ್ಞೆ ತೆರವುಗೊಳಿಸಲು ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು.

ಕೆರೆಗಳ ತವರು ಎಂದು ಪ್ರಸಿದ್ದಿ ಪಡೆದಿರುವ ಜಿಲ್ಲೆಯ ಕೆರೆಗಳನ್ನು ಉಳಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಪೂರ್ವಜರು ಬೆವರು ಸುರಿಸಿ ಕಟ್ಟಿ ಬೆಳೆಸಿದ ಕೆರೆಗಳು ದಿನೇ ದಿನೇ ರಿಯಲ್ ಎಸ್ಟೇಟ್ ಉದ್ದಿಮೆಗಳ ಪಾಲಾಗಿ ಜಲ ಮೂಲಗಳು ಸಂಪೂರ್ಣವಾಗಿ ನಶಿಸಿ ಹೋಗುತ್ತಿರುವ ಜೊತೆಗೆ ಇತ್ತೀಚೆಗೆ ಸುರಿಯುತ್ತಿರುವ ಮಳೆಗೆ ಸಮಪರ್ಕವಾದ ಕೆರೆ, ರಾಜಕಾಲುವೆಗಳ ಅಭಿವೃದ್ಧಿ ಪಡಿಸದೇ ಇರುವ ಕಾರಣ ರೈತರ ಹೊಲಗಳು ಮತ್ತು ನಗರದ ಮನೆಗಳಿಗೆ ನೀರು, ನುಗ್ಗಿ ಅವಾಂತರ ಸೃಷ್ಟಿ ಮಾಡುತ್ತಿವೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ಬಾರಿ ಅನಾಹುತ ಸಂಭವಿಸುವ ಕಾಲ ದೂರವಿಲ್ಲ ಎಂದು ಭವಿಷ್ಯ ನುಡಿದರು.

ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳನಿ ಗೌಡ ಮಾತನಾಡಿ, ತಾಲ್ಲೂಕಿನಾದ್ಯಂತ ಭೂರಹಿತ ಬಡವರಿಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಲು ನಮೂನೆ 50, 53, 57, 59 ಅರ್ಜಿ ಸಲ್ಲಿಸಿ, ಜಾಥಕ ಪಕ್ಷಿಗಳಂತೆ ದರಕಾಸ್ತು ಕಮಿಟಿ ಮೂಲಕ ಮಂಜೂರಾಗಬೇಕಾದ ಜಮೀನು ಲಕ್ಷಾಂತರ ರೂಪಾಯಿ ಲಂಚ ಪಡೆದು ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿ ಮಾಡಿ ಬಲಾಡ್ಯರಿಗೆ ಸಾಗುವಳಿ ಚೀಟಿ ನೀಡಿರುವವರ ವಿರುದ್ಧ ತನಿಖೆ ಮಾಡುವಂತೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಒಳಗೊಂಡಂತೆ ರಚನೆ ಮಾಡಿದ ತನಿಖೆ ತಂಡ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಕೂಡಲೇ ತಹಸೀಲ್ದಾರ್ ವಿಜಯಣ್ಣನವರ ಅವಧಿಯಲ್ಲಿ ನಡೆದಿರುವ ಅಕ್ರಮ ಸಾಗುವಳಿ ಚೀಟಿ ರದ್ದು ಮಾಡಿ, ನ್ಯಾಯಯುತವಾಗಿ ಬಡವರಿಗೆ ಜಮೀನು ಮಂಜೂರು ಮಾಡಬೇಕೆಂದು ತಹಸೀಲ್ದಾರ್ ರವರನ್ನು ಒತ್ತಾಯಿಸಿದರು.


ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ ಮಾತನಾಡಿ ತಾಲ್ಲೂಕು ಕಛೇರಿ ಬಡವರ ಪಾಲಿಗೆ ಮುಳ್ಳಿನ ಹಾದಿಯಾಗಿ ದಲ್ಲಾಳಿಗಳಿಗೆ ರತ್ನ ಕಂಬಳಿ ಚಾಚುವ ಇಲಾಖೆಯಾಗಿದೆ. ಜನನ ಪ್ರಮಾಣ ಪತ್ರದಿಂದ ಮರಣ ಪ್ರಮಾಣ ಪತ್ರದವರೆಗೂ ಲಂಚ ವಿಲ್ಲದೆ ಯಾವುದೇ ಕೆಲಸ ಜನ ಸಾಮಾನ್ಯರಿಗೆ ಆಗುತ್ತಿಲ್ಲವೆಂದು ಅಸಮದಾನ ವ್ಯಕ್ತಪಡಿಸಿದರು.

ಕೂಡಲೇ ಮಾನ್ಯ ದಂಡಾಧಿಕಾರಿಗಳು ಕಛೇರಿಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ ಬಡವರ ಕೆಲಸ ಯಾವುದೇ ಲಂಚವಿಲ್ಲದೆ ಮಾಡಿಕೊಡಲು ಸೂಚನೆ ಮಾಡಬೇಕು. ಹಾಗೂ ಮಂಜೂರಾಗಿ ಪಿ ನಂಬರ್‍ನಲ್ಲಿರುವ ರೈತರಿಗೆ ಪಿ ನಂಬರ್ ಮುಕ್ತಿ ಮಾಡಲು ಪಂಚಾಯಿತಿಗೊಂದು ಕಂದಾಯ ಅದಾಲತ್ ನಡೆಸುವ ಮುಖಾಂತರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಮಾನ್ಯರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು