5:55 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾವಣೆ

21/10/2024, 11:49

ಪುತ್ತೂರು(reporterkarnataka.com): ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಭಾನುವಾರ ಆರಂಭಿಸಲಾಯಿತು.
ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಹಾಗೂ ಪುತ್ತೂರು ಶ್ರೀ ಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯ ಹಾಗೂ ಹಸಂತಡ್ಕ ಮುರಳಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಚಾಲನೆ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100ಕ್ಕೂ ಮಿಕ್ಕಿ ನೋಂದಾಯಿತ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮಾಹಿತಿಯನ್ನು ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ವೀಣಾ ಬಾಲಕೃಷ್ಣ ಅವರು ಧಾರ್ಮಿಕ ಶಿಕ್ಷಣದ ಮಾಹಿತಿ ಹಾಗೂ ತಮ್ಮ ಕೇಂದ್ರದ ಮುಖೇನ ಬಿಡುಗಡೆಗೊಳಿಸಿರುವ ಧಾರ್ಮಿಕ ಪಠ್ಯಪುಸ್ತಕ ಕುರಿತಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಸಂಚಾಲಕರಾದ ವಸಂತ ನಡುಬೈಲು , ಗೌರವಾಧ್ಯಕ್ಷರಾದ ಐತ್ತಪ್ಪ ಅಲೆಕ್ಕಾಡಿ ಮತ್ತು ವಸಂತ ಹುದೇರಿ, ಅಧ್ಯಕ್ಷರಾದ ಧ್ರುವಕುಮಾರ್ ಕೇರ್ಪಡ , ಶ್ರೀ ಕೇತ್ರ ಕೇರ್ಪಡದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪರಾಜ ರೈ , ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಸುಹಾಸ್ ಅಲೆಕ್ಕಾಡಿ , ನಿಂತಿಕಲ್ಲು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಪದ್ಮನಾಭ ಪೂದೆ , ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು , ಪೋಷಕರು
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು