1:16 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು

18/07/2022, 22:00

ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ  ಜು18 ರ ಮಧ್ಯರಾತ್ರಿ ನಡೆದಿದೆ. 

ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ  ಮನೆಯಲ್ಲಿ ಈ ಘಟನೆ ನಡೆದಿದೆ .

ಕೃಷ್ಣಭಟ್  ಅವರು ಜು.18 ರಂದು ತಡರಾತ್ರಿ 1:30 ಗಂಟೆಯ ಸಮಯಕ್ಕೆ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದ ಕೇಳಿ ಮನೆ ಬಾಗಿಲನ್ನು ತೆರೆದು ಹೊರಗೆ ಬಂದಾಗ ಯಾರೋ 2 ಜನ ಅಪರಿಚಿತರಿದ್ದು, ಓರ್ವ ಇವರ ಮುಖಕ್ಕೆ ಮೆಣಸಿನ ಪುಡಿಯನ್ನು ಎಸೆದು, ಇನ್ನೊಬ್ಬನು ಗಟ್ಟಿಯಾಗಿ ಹಿಡಿದು ಪಂಚೆಯನ್ನು ಹಿಡಿದೆಳೆದು ಅದನ್ನು ಅವರ ಮುಖಕ್ಕೆ ಸುತ್ತಿ ಕೂಗಾಡದಂತೆ ಬಾಯಿ ಹಾಗೂ ಕುತ್ತಿಗೆಯನ್ನು ಒತ್ತಿ ಹಿಡಿದಿದ್ದ ಕೂಡಲೇ ಕೃಷ್ಣ ಭಟ್ ರವರು ತಪ್ಪಿಸಿಕೊಂಡು ಜೋರಾಗಿ ಬೊಬ್ಬೆ ಹೊಡೆದಾಗ ಇವರ ಕೈಯಲ್ಲಿದ್ದ ಟಾರ್ಚನ್ನು ತೆಗೆದುಕೊಂಡು ಇಬ್ಬರು ಅಪರಿಚಿತರು ಅಲ್ಲಿಂದ ಓಡಿ ಹೋಗಿದ್ದಾರೆ. ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು