12:38 PM Monday17 - March 2025
ಬ್ರೇಕಿಂಗ್ ನ್ಯೂಸ್
Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ:… ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ… ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.…

ಇತ್ತೀಚಿನ ಸುದ್ದಿ

KFD | ಚಿಕ್ಕಮಗಳೂರು: ಮಹಾಮಾರಿ ಕೆಎಫ್ ಡಿಗೆ ಕಾಫಿನಾಡಲ್ಲಿ ಮೊದಲ ಬಲಿ; ಕೊಪ್ಪದ ವೃದ್ದೆ ಸಾವು

17/03/2025, 12:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಕೆ.ಎಫ್.ಡಿ. (ಕಯಾಸನೂರು ಅರಣ್ಯ ಜ್ವರ) ಮತ್ತೊಮ್ಮೆ ತೀವ್ರತೆ ಹೆಚ್ಚಿಸಿಕೊಂಡಿದ್ದು, 65 ವರ್ಷದ ವೃದ್ಧೆ ಈ ಮಂಗಮ ಖಾಯಿಲೆಗೆ ಬಲಿಯಾಗಿದ್ದಾರೆ.
*ಘಟನೆಯ ವಿವರ:*
ವೃದ್ಧೆ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.
ಜ್ವರ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಕೆ.ಎಫ್.ಡಿ. ಸೋಂಕು ದೃಢಪಟ್ಟಿತು.
ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ, ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ.
*ಸರ್ಕಾರದ ಎಚ್ಚರಿಕೆ:*
ಬೇಸಿಗೆ ಕಾಲದಲ್ಲಿ ಹಳ್ಳಿಗಳಲ್ಲಿ ಕೆ.ಎಫ್.ಡಿ. ಸೋಂಕು ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಮುಂಜಾಗ್ರತಾ ಕ್ರಮವಾಗಿ ತೋಟಗಳಿಗೆ ಹೋಗುವಾಗ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಕಾಡು ಪ್ರದೇಶಗಳಲ್ಲಿ ಹೆಚ್ಚು ಸಮಯ ಕಳೆದರೆ ಸೋಂಕು ಹಿಡಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಗ್ರಾಮಸ್ಥರು ಹಾಗೂ ತೋಟ ಕಾರ್ಮಿಕರು ಎಚ್ಚರಿಕೆಯಿಂದ ಇರಬೇಕಾಗಿದ್ದು, ಜ್ವರದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು