5:57 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೆಎಫ್‌ಡಿ ಸೋಂಕು: ತೀರ್ಥಹಳ್ಳಿಯ ಮಹಿಳೆ ಸಾವು; ವರ್ಷದ ಮೊದಲ ಬಲಿ

25/02/2025, 11:01

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ.
ಕೊನೇರಿಪುರದ 55 ವರ್ಷದ ಮಹಿಳೆಗೆ ಜ.23ರಂದು ಕೆಎಫ್‌ಡಿ ಪಾಸಿಟಿವ್ ಬಂದಿತ್ತು. ನಂತರ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿತ್ತು. ಗುಣಮುಖರಾಗಿದ್ದ ಅವರು ಜ.29ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ರೋಗದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಫೆ.5ರಂದು ಮಣಿಪಾಲಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಫೆ.14ರಂದು ಮೃತಪಟ್ಟಿದ್ದಾರೆ. ಮಹಿಳೆಯು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು