ಇತ್ತೀಚಿನ ಸುದ್ದಿ
ವಿರಾಜಪೇಟೆ ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ: ಮರಣೋತ್ತರ ಪರೀಕ್ಷಾ ವರದಿಯಿಂದ ಬಹಿರಂಗ
24/10/2025, 15:31
ಗಿರಿಧರ್ ಕೊಂಪುಳಿರ ಬೆಂಗಳೂರು
info.reporterkarnataka@gmail com
ಬೆಂಗಳೂರು ನಗರದ ಮಡಿವಾಳದಲ್ಲಿರುವ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ಯುವಕ ತಕ್ಷಿತ್ ಸಾವಿಗೀಡಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ಮರಣೋತ್ತರ ಪರೀಕ್ಷಾ ವರದಿ ಈಗ ಪೊಲೀಸರ ಕೈ ಸೇರಿದ್ದು, ಅದರಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ.
ವರದಿಯ ಪ್ರಕಾರ, ತಕ್ಷಿತ್ ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾನೆ ಎಂಬುದು ದೃಢಪಟ್ಟಿದೆ. ಜೊತೆಗೆ ಆತನಿಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾದಿಂದ ಕೂಡ ಇತ್ತು ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಯುವಕನ ಸಾವು ಆರೋಗ್ಯ ಸಮಸ್ಯೆಯಿಂದ ಸಂಭವಿಸಿರುವ ಸಾಧ್ಯತೆ ಹೆಚ್ಚು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ತಕ್ಷಿತ್ ಹಾಗೂ ಓರ್ವ ಯುವತಿ ಕಳೆದ ಎಂಟು ದಿನಗಳಿಂದ ಮಡಿವಾಳದ ಲಾಡ್ಜ್‌ನಲ್ಲಿ ವಾಸವಾಗಿದ್ದರು. ಈ ಅವಧಿಯಲ್ಲಿ ತಕ್ಷಿತ್ ಏಕಾಏಕಿ ಅಸ್ವಸ್ಥಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಯು ಅನುಮಾನಾಸ್ಪದವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ವಿಚಾರಣೆಗೊಳಪಡಿಸಿದ್ದು, ಆಕೆ “ಫುಡ್ ಪಾಯಿಸನ್ ಆಗಿರಬಹುದು” ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಯುವತಿ ಹಾಗೂ ತಕ್ಷಿತ್ ಆನ್‌ಲೈನ್ ಮೂಲಕ ಆಹಾರವನ್ನು ಎಲ್ಲಿಂದ ಆರ್ಡರ್ ಮಾಡಿದ್ದರು, ಅವರು ಸೇವಿಸಿದ ಮಾತ್ರೆಗಳ ಸ್ವರೂಪ ಏನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ದೊರೆತಿಲ್ಲ. ಕಿಡ್ನಿ ವೈಫಲ್ಯಕ್ಕೆ ನಿಖರವಾದ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.













