9:14 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ: ಮರಣೋತ್ತರ ಪರೀಕ್ಷಾ ವರದಿಯಿಂದ ಬಹಿರಂಗ

24/10/2025, 15:31

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail com

ಬೆಂಗಳೂರು ನಗರದ ಮಡಿವಾಳದಲ್ಲಿರುವ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ಯುವಕ ತಕ್ಷಿತ್ ಸಾವಿಗೀಡಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ಮರಣೋತ್ತರ ಪರೀಕ್ಷಾ ವರದಿ ಈಗ ಪೊಲೀಸರ ಕೈ ಸೇರಿದ್ದು, ಅದರಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ.
ವರದಿಯ ಪ್ರಕಾರ, ತಕ್ಷಿತ್ ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾನೆ ಎಂಬುದು ದೃಢಪಟ್ಟಿದೆ. ಜೊತೆಗೆ ಆತನಿಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾದಿಂದ ಕೂಡ ಇತ್ತು ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಯುವಕನ ಸಾವು ಆರೋಗ್ಯ ಸಮಸ್ಯೆಯಿಂದ ಸಂಭವಿಸಿರುವ ಸಾಧ್ಯತೆ ಹೆಚ್ಚು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ತಕ್ಷಿತ್ ಹಾಗೂ ಓರ್ವ ಯುವತಿ ಕಳೆದ ಎಂಟು ದಿನಗಳಿಂದ ಮಡಿವಾಳದ ಲಾಡ್ಜ್‌ನಲ್ಲಿ ವಾಸವಾಗಿದ್ದರು. ಈ ಅವಧಿಯಲ್ಲಿ ತಕ್ಷಿತ್ ಏಕಾಏಕಿ ಅಸ್ವಸ್ಥಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಯು ಅನುಮಾನಾಸ್ಪದವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ವಿಚಾರಣೆಗೊಳಪಡಿಸಿದ್ದು, ಆಕೆ “ಫುಡ್ ಪಾಯಿಸನ್ ಆಗಿರಬಹುದು” ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಯುವತಿ ಹಾಗೂ ತಕ್ಷಿತ್ ಆನ್‌ಲೈನ್ ಮೂಲಕ ಆಹಾರವನ್ನು ಎಲ್ಲಿಂದ ಆರ್ಡರ್ ಮಾಡಿದ್ದರು, ಅವರು ಸೇವಿಸಿದ ಮಾತ್ರೆಗಳ ಸ್ವರೂಪ ಏನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ದೊರೆತಿಲ್ಲ. ಕಿಡ್ನಿ ವೈಫಲ್ಯಕ್ಕೆ ನಿಖರವಾದ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು