1:38 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಖಿನ್ನತೆ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸ್ಟಾಫ್ ನರ್ಸ್

23/07/2022, 00:14

ಬೆಂಗಳೂರು(reporterkarnataka.com): ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅವಿವಾಹಿತರಾದ ಸುಮಿತ್ರಾ (32) ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 

ಮದುವೆಯಾಗಿಲ್ಲ ಎಂಬ ವಿಚಾರವಾಗಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಕುಟುಂಬಸ್ಥರೊಂದಿಗೆ ವಾಸವಿದ್ದ ಸುಮಿತ್ರಾ ಮುಂಜಾನೆ ಕೆಲಸಕ್ಕೆ ತೆರಳಬೇಕಾದವರು ಎದ್ದಿರಲಿಲ್ಲ. ಕುಟುಂಬಸ್ಥರು‌ ಕೋಣೆಯ ಬಾಗಿಲು ತಟ್ಟಿದರೂ ಸಹ ಬಾಗಿಲು ತೆರೆಯಲಿಲ್ಲ. ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಸುಮಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆ ಗಿರಿನಗರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಈ ವೇಳೆ ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಖುಷಿಯಾಗಿ ಕಳುಹಿಸಿಕೊಡಿ ಎಂದು ಬರೆಯಲಾಗಿದೆ. ಇನ್ನೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು