3:00 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೆಐಒಸಿಎಲ್: ಮಂಗಳೂರು 2 ಯೋಜನೆ  ಸೇರಿದಂತೆ ಒಟ್ಟು 4 ಯೋಜನೆಗಳಿಗೆ ಕೇಂದ್ರ ಆಸ್ತು

23/06/2021, 07:59

ಮಂಗಳೂರು(reporterkarnataka news); ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ  ಮಂಗಳೂರಿನಲ್ಲಿ ಮಾಡಲುದ್ದೇಶಿಸಿದ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.

ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್  ಅವರು ವರ್ಚುವಲ್ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ  ಮೂಡಬಿದಿರೆಯ ಸರ್ಕಾರಿ ಆಸ್ಪತ್ರೆಗೆ  50 ಹಾಸಿಗೆಗಳನ್ನು ಒಟ್ಟು ರೂ. 18.00 ಲಕ್ಷ ವೆಚ್ಚದಲ್ಲಿ ನೀಡುವ ಕಾರ್ಯಕ್ರಮ ಹಾಗೂ ಮಂಗಳೂರಿನ ಕೆ.ಐ.ಒ.ಸಿ.ಎಲ್ ಪೆಲೆಟ್ ಪ್ಲಾಂಟ್ ನ ಆಧುನೀಕರಣದ ಅಂಗವಾಗಿ   ಸುಮಾರು 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬ್ಯಾರೆಲ್ ಟೈಪ್ ಬ್ಲೆಂಡರ್ ರೆಕ್ಲೈಮರ್ (Barrel Type Blender Reclaimer) ನ್ನು ಕೇಂದ್ರ ಸಚಿವರು ಉದ್ಘಾಟಿಸಿದರು. 

ಕೋವಿಡ್ 19 ವೈರಾಣು ರೋಗದ ವಿರುದ್ದ ಹೋರಾಡುವ ನಿಟ್ಟಿನಲ್ಲಿ ಕುದುರೆಮುಖ ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ ಈಗಾಗಲೇ ಜಿಲ್ಲಾಡಳಿತಕ್ಕೆ ಅಂಬುಲೆನ್ಸ್, ವೆಂಟಿಲೇಟರ್ ಸೇರಿದಂತೆ ಉಪ್ಪಿನಂಗಡಿ ಹಾಗೂ ಮೂಡಬಿದಿರೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 250LPM (ಲೀಟರ್ ಪರ್ ಮಿನಿಟ್) ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕವನ್ನು ನೀಡುತ್ತಿರುವುದಕ್ಕಾಗಿ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಖಾತೆಯ ಸಚಿವರ

ಧರ್ಮೇಂದ್ರ ಪ್ರಧಾನ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.ಸಂಸದ ನಳಿನ್ ಕುಮಾರ್ ಕಟೀಲ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವಥ ನಾರಾಯಣ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು