5:14 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಕೆಐಒಸಿಎಲ್ ನಿಂದ ಮಾದರಿ ಕಾರ್ಯ: ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ; 2 ಕೋಟಿ ಮೊತ್ತದ ಚೆಕ್ ವಿತರಣೆ

06/10/2022, 20:34

ಮಂಗಳೂರು(reporter Karnataka.com): ಸ್ಥಳೀಯ ಉದ್ಯೋಗದ ಬೇಡಿಕೆಗಳನ್ನು ಈಡೇರಿಸಿ, ಯಾವುದೇ ರೀತಿಯ ವಿರೋಧಗಳು ವ್ಯಕ್ತವಾಗದಂತೆ  ಕೆಐಒಸಿಎಲ್ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ (ಕೆಐಒಸಿಎಲ್) ಸಿಎಸ್‍ಆರ್ ನಿಧಿಯಡಿ ವಿವಿಧ ಸಂಸ್ಥೆಗಳು, ಇಲಾಖೆಗಳಿಗೆ ಒಟ್ಟು 2 ಕೋಟಿ ರೂ.ಗಳ ಮೊತ್ತದ ಚೆಕ್ ವಿತರಿಸಿ ಮಾತನಾಡಿದರು.

ಯಾವುದೇ ಸ್ಥಳದಲ್ಲಿ ಹೊಸ ಉದ್ದಿಮೆಗಳು ಆರಂಭವಾದಾಗ ಸ್ಥಳೀಯರಿಂದ ಉದ್ಯೋಗದ ಬೇಡಿಕೆಗಳು ಬರುವುದು ಸಹಜ.  ಆ ಬೇಡಿಕೆಗಳನ್ನು ಪೂರೈಸಿದ ಸಂಸ್ಥೆ ಕೆಐಒಸಿಎಲ್ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಮೂರು ಕಡೆಗಳಲ್ಲಿ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಘಟಕ, ವಿವಿಧೆಡೆ ಕಿಟ್, ಆಂಬುಲೆನ್ಸ್ ನೀಡುವ ಮೂಲಕ ನೆರವಾಗಿದೆ. ಪ್ರಸ್ತುತ ಆರೋಗ್ಯ, ಸೇವೆ, ರಕ್ಷಣೆ, ಶಿಕ್ಷಣ ಹೀಗೆ ವಿಂಗಡಣೆ ಮಾಡಿಕೊಂಡು ಸಿಎಸ್‍ಆರ್ ನಿಧಿಯನ್ನು ವಿತರಿಸಿದೆ ಎಂದು ಅವರು ಶ್ಲಾಘಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಮಾತನಾಡಿ, ‘ಕೆಐಒಸಿಎಲ್ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಸ್ಥಾಪನೆಗೆ ಸಂಸ್ಥೆ ನೆರವು ನೀಡಿದೆ, ಆ ಮೂಲಕ ಕಿಡ್ನಿ ಸಮಸ್ಯೆ ಎದುರಿಸುವ ರೋಗಿಗಳ ಚಿಕಿತ್ಸೆಗೆ ನೆರವಾಗುತ್ತಿದೆ, ಡಯಾಲಿಸಿಸ್‍ಗೆ ಬರುವವರು ಕಾಯುವ ಸ್ಥಿತಿ ಇರುವುದಿಲ್ಲ, ಮಕ್ಕಳ ಸಹಾಯವಾಣಿಗೆ ತೀರಾ ಅಗತ್ಯವಿದ್ದ ವಾಹನ ಖರೀದಿಗೆ ಕೆಐಒಸಿಎಲ್ ಧನ ಸಹಾಯ ಒದಗಿಸಿದೆ ಎಂದು ಪ್ರಶಂಸೆ ವ್ಯಕೆಐಒಸಿಎಲ್ ಸಿಎಂಡಿ ಸಾಮಿನಾಥನ್ ಮಾತನಾಡಿ, ‘ಸಂಸ್ಥೆಯ ಕಳೆದ ವರ್ಷ ಕೂಡ ಸಿಎಸ್‍ಆರ್ ನಿಧಿಯಲ್ಲಿ ಸಾರ್ವಜನಿಕ ಕಾರ್ಯಗಳಿಗೆ ನೆರವು ನೀಡಿದೆ ಎಂದರು.

ಕೆಐಒಸಿಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ರಾಮಕೃಷ್ಣ ರಾವ್, ಹಣಕಾಸು ವಿಭಾಗದ ನಿರ್ದೇಶಕ ಸ್ವಪನ್ ಕುಮಾರ್, ಉತ್ಪಾದನೆ ಮತ್ತು ಯೋಜನೆ ವಿಭಾಗದ ನಿರ್ದೇಶಕ ಭಾಸ್ಕರ್ ರೆಡ್ಡಿ, ವಾಣಿಜ್ಯ ವಿಭಾಗದ ನಿರ್ದೇಶಕ ವಿನಯ್ ಕೃಷ್ಣ ಮೊಹಪಾತ್ರ, ಎಚ್‍ಆರ್ ವಿಭಾಗದ ಹಿರಿಯ ವ್ಯವಸ್ಥಾಪಕರಾದ ಜಿ.ವಿ.ಕಿರಣ್, ಮುರ್ಗೇಶ್ ಎಚ್ ಉಪಸ್ಥಿತರಿದ್ದರು.


ವೆನ್ಲಾಕ್ ಆಸ್ಪತ್ರೆಯ ಡಯಾಲಿಸಿಸ್ ಘಟಕ, ಪುತ್ತೂರು ಮಣಿಯಾಕರ ಶಾಲೆಯ ಎರಡು ಕೊಠಡಿ ನಿರ್ಮಾಣ, ಕಾವೂರು ಪಿಯು ಕಾಲೇಜಿನ ಎರಡು ಕೊಠಡಿ ನಿರ್ಮಾಣ, ಮಕ್ಕಳ ಸಹಾಯವಾಣಿ ಘಟಕಕ್ಕೆ ವಾಹನ ಖರೀದಿ, ವೆನ್ಲಾಕ್ ಆಸ್ಪತ್ರೆ ಕಟ್ಟಡ ದುರಸ್ತಿ, ಕುತಾರ್‍ನ ಮಂಗಲಾ ಸೇವಾ ಸಮಿತಿ, ಬಂಟ್ವಾಳ ವಾಮಪದವು ಸಮುದಾಯ ಆರೋಗ್ಯ ಕೇಂದ್ರದ ಎಕ್ಸರೇ ಯಂತ್ರ ಖರೀದಿ, ಪೆÇಲೀಸ್ ಕ್ವಾರ್ಟರ್ಸ್ ಕೌನ್ಸೆಲಿಂಗ್ ಹಾಲ್ ದುರಸ್ತಿ, ಭಾರತಿ ಗೋಶಾಲೆ ಸೇರಿದಂತೆ ವಿವಿಧ ಇಲಾಖೆ, ಸಂಸ್ಥೆಗಳಿಗೆ ಒಟ್ಟು  2 ಕೋಟಿ ರೂ.ಗಳ ಮೊತ್ತದ ಚೆಕ್ ಅನ್ನು ಸಂಸದರು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು