8:26 PM Monday30 - March 2026
ಬ್ರೇಕಿಂಗ್ ನ್ಯೂಸ್
ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ…

ಇತ್ತೀಚಿನ ಸುದ್ದಿ

ಕಿರಿ ವಯಸ್ಸಿನಲ್ಲಿ ಯು.ಟಿ. ಖಾದರ್ ಗೆ ಸ್ಪೀಕರ್ ಸ್ಥಾನ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಶ್ಲಾಘನೆ

09/06/2023, 21:09

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದರು.
ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು