9:03 AM Thursday31 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗೆ ಸಾಲ ಸೌಲಭ್ಯ:  ಶೇ. 2 ಬಡ್ಡಿ, ಸಹಾಯ ಧನ ಲಭ್ಯ

21/12/2021, 18:24

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗಿನ ಸಾಲದ ಮೊತ್ತಕ್ಕೆ ಶೇ. 2ರಷ್ಟು ಬಡ್ಡಿ ಸಹಾಯ ಧನ ಲಭ್ಯವಿರುತ್ತದೆ. ಅಲ್ಲದೇ ಸಕಾಲದಲ್ಲಿ ಈ ಸಾಲ ಮರುಪಾವತಿ ಮಾಡಿದವರಿಗೆ ವಾರ್ಷಿಕ ಶೇ. 3ರಷ್ಟು ಹೆಚ್ಚುವರಿ ಬಡ್ಡಿ ಸಹಾಯ ಧನದ ಸೌಲಭ್ಯವನ್ನು ವಿತರಣೆ ಮಾಡಲಾಗುವುದು.

ಈ ಯೋಜನೆಯನ್ನು ರೈತರು ಸದುಪಯೋಗ ಪಡಿಸಿಕೊಳ್ಳುವಂತೆ ಸಹಾಯಕ ನಿರ್ದೇಶಕ ಡಾ.ರೇವಣ್ಣ ತಿಳಿಸಿದ್ದಾರೆ.

ನಗರದ ತಾಲೂಕು ಪಶು ಸಂಗೋಪನೆ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ವಿವಿಧ ಪಶು ಚಿಕಿತ್ಸಾ ಕೇಂದ್ರಗಳಿಗೆ ಔಷಧಿ ವಿತರಣೆ ಮಾಡಿ ನಂತರ ಮಾತನಾಡಿದರು. 

ನ.15 ರಿಂದ 2022 ರ ಫೆ15 ರವರೆಗೆ ಹೊಸ ಕಿಸಾನ್ ಕ್ರೆಡಿಟ್ ಕಾರ್ಡ್‍ಗಳನ್ನು ವಿತರಿಸಲು ಆಯಾ ಪಶು ಚಿಕಿತ್ಸಾ ಕೇಂದ್ರಗಳ ವ್ಯಾಪ್ತಿಯಲ್ಲಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಹಸು-ಎಮ್ಮೆ, ಕುರಿ, ಕೋಳಿ, ಹಂದಿ, ಮೇಕೆ, ಸಾಕಾಣಿಕೆದಾರರು ಆಯಾ ವ್ಯಾಪ್ತಿಯ ಪಶು ಚಿಕಿತ್ಸಾ ಕೇಂದ್ರದಲ್ಲಿ ಆಧಾರ್ ಕಾರ್ಡ್, ಪಹಣಿ, ಎರಡು ಇತ್ತೀಚಿನ ಭಾವಚಿತ್ರ, ಸ್ಥಳೀಯ ಪಶು ವೈದ್ಯರಿಂದ ಜಾನುವಾರುಗಳು ಹೋಂದಿರುವ ಬಗ್ಗೆ ದೃಡೀಕರಣ ಪ್ರಮಾಣ ಪತ್ರ ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಿಕೊಂಡವರಿಗೆ ಕೇಂದ್ರ ಸರಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಅರ್ಹ ರೈತರಿಗೆ ಆರ್ಥಿಕ ನೆರವು ಒದಗಿಸಲಾಗುವುದು.

ಕೇಂದ್ರ ಸರಕಾರದ ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆಯು ಹಸು-ಎಮ್ಮೆ ಮಿಶ್ರತಳಿ ನಿರ್ವಹಣೆ, ಕುರಿ-ಮೇಕೆ, ಹಂದಿ, ಕೋಳಿ,  ಉಪ ಕಸುಬುಗಳನ್ನು ಕೈಗೊಳ್ಳಲು ಅವಶ್ಯಕತೆಯಿರುವ ಬಂಡವಾಳವನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಅರ್ಹರಿಗೆ ಸಾಲ ಸೌಲಭ್ಯ ಕಲ್ಪಿಸಲು ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿಧರದಲ್ಲಿ ಸಾಲಸೌಲಭ್ಯ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಪಶು ಚಿಕಿತ್ಸಾ ಕೇಂದ್ರಗಳಿಗೆ ಔಷಧಿ ವಿತರಣೆ.ತಾಲೂಕಿನ 29 ಪಶು ಚಿಕಿತ್ಸಾ ಕೇಂದ್ರಗಳಿಗೆ ಪಶು ಸಂಗೋಪನೆ ಇಲಾಖೆಯಿಂದ ಸರಬರಾಜು ಆಗಿದ್ದ ಕಾಲು ಬಾಯಿ ಜ್ವರ, ಕುರಿ ಮೇಕೆ ನಡುಕ, ಕುಂಟು ಬೀಳುವುದು, ಜಂತು ನಿವಾರಣೆ ದೇರಿದಂತೆ ವಿವಿಧ ರೋಗಳಿಗೆ ಔಷಧಿ ಹಾಗೂ ಲಸಿಕೆಗಳನ್ನು ವಿತರಣೆ ಮಾಡಿದ್ದು ಇನ್ನು ಒಂದು ವಾರದಲ್ಲಿ ಕುರಿ ಮಂಡಳಿಯಿಂದ ಸಾಕಷ್ಟು ಔಷಧಿಗಳು ಬರಲಿದ್ದು ಎಲ್ಲಾ ಪಶು ಚಿಕಿತ್ಸಾ ಕೇಂದ್ರಗಳಿಗೆ ವಿತರಣೆ ಮಾಡಲಾಗುವುದು. ನೀಲಿ ನಾಲಿಗೆ ರೋಗ ಬಾಧೆಗೆ ಕುರಿ,ಮೇಕೆಗಳು ಮೃತ ಪಡುತ್ತಿದ್ದು ಸಮೀಪದ ಪಶು ವೈದ್ಯರಿಂದ ಮೃತಪಟ್ಟಿರುವ  ಕುರಿ ಮೇಕೆಗಳ ಶವ ಪರೀಕ್ಷೆ ಮಾಡಿಸಿ ಅಗತ್ಯ ದಾಖಲೆಗಳನ್ನು ನೀಡಿದರೆ “ಅನುಗ್ರಹ” ಯೋಜನೆಯಡಿ 5 ಸಾವಿರ ರೂ ಪರಿಹಾರವನ್ನು ಕೊಡಿಸಲಾಗುವುದು ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ.ಶ್ರೀನಿವಾಸ್‍ಬಾಬು, ಡಾ.ರಘುವೀರ್, ಪಶು ಇನ್ಸ್‍ಪೆಕ್ಟರ್‍ಗಳಾದ ಹೊನ್ನಮೂರ್ತಿ, ಶಾಂತಮೂರ್ತಿ ಇತರರಿದ್ದರು.

ಫೋಟೊ ಚಳ್ಳಕೆರೆ ನಗರದ ತಾಲೂಕು ಪಶು ಸಂಗೋಪನೆ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ವಿವಿಧ ಪಶು ಚಿಕಿತ್ಸಾ ಕೇಂದ್ರಗಳಿಗೆ ಸಹಾಯಕ ನಿರ್ದೇಶಕ ಡಾ.ರೇವಣ್ಣ  ಔಷಧಿ ವಿತರಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು