1:17 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೆಎಂಬಿಯು ರಾಜ್ಯದ ಜಲಮಾರ್ಗ ಅಭಿವೃದ್ಧಿಪಡಿಸುವ ಗುರಿ ಹೊಂದಿದೆ: ಸಿಇಒ ಜಯರಾಮ್ ರಾಯಪುರ್

01/06/2024, 17:16

ಬೆಂಗಳೂರು(reporterkarnataka.com):ಪ್ರಸ್ತುತ ಕರ್ನಾಟಕ ಜಲಸಾರಿಗೆ ಮಂಡಳಿಯು ಕರ್ನಾಟಕ ಜಲಸಾರಿಗೆಗೆ ಮೂಲಸೌಕರ್ಯ ಒದಗಿಸುವ, ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ರಾಜ್ಯದ ಜಲಮಾರ್ಗಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ರಾಯಪುರ್ ಅವರು ಹೇಳಿದರು.
ನಗರದ ರೆಸಿಡೆನ್ಸಿ ರೋಡ್‌ ನಲ್ಲಿರುವ ವಿವಾಂತ್‌ ಹೋಟೆಲ್‌ ನ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ “ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿ” ಯ ಸಂವಾದದಲ್ಲಿ ಅವರು ಮಾತನಾಡಿದರು.
ಕರ್ನಾಟಕ ಜಲಸಾರಿಗೆ ಮಂಡಳಿ (ಕೆಎಂಬಿ) ತನ್ನ ಪ್ರಸ್ತುತ ಮತ್ತು ಮುಂಬರುವ ಪ್ರವಾಸೋದ್ಯಮ ಮತ್ತು ಜಲಮಾರ್ಗ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಯೋಜನೆಗಳಿಂದ ಗುರುತಿಸಲಾದ ವಿವಿಧ ಸ್ಥಳಗಳಲ್ಲಿ ಒಳನಾಡಿನ ಜಲಮಾರ್ಗ ಪ್ರವಾಸೋದ್ಯಮ, ಕರ್ನಾಟಕದಲ್ಲಿ ದ್ವೀಪ ಮಾಸ್ಟರ್ ಪ್ಲ್ಯಾನ್ ಅಭಿವೃದ್ಧಿ, ಶರಾವತಿ ನದಿ ಪ್ರವಾಸೋದ್ಯಮ, ವಾಟರ್ ಏರೋಡ್ರೋಮ್ ಗಳ ಕಾರ್ಯಾಚರಣೆ ಸೇರಿದಂತೆ ಹಲವು ಮಹತ್ವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಸಂವಾದ ಸಭೆಯ ಅಧ್ಯಕ್ಷತೆ ವಹಿಸಿದ ಐಡಬ್ಲ್ಯೂಎಐ ಅಧ್ಯಕ್ಷರಾದ ವಿಜಯ್ ಕುಮಾರ್ ಅವರು ಮಾತನಾಡಿ, ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮತ್ತು ಅದರ ಮಧ್ಯಸ್ಥಗಾರರಿಗೆ ಐಡಬ್ಲ್ಯೂಎಐ ಹೇಗೆ ಸಹಾಯ ಮತ್ತು ಬೆಂಬಲವನ್ನು ಒದಗಿಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಪ್ರಸ್ತುತ ಐಡಬ್ಲ್ಯೂಎಐನ ವಿವಿಧ ಯೋಜನೆಗಳು ಮತ್ತು ಅದರ ಕಾರ್ಯಗಳ ಬಗ್ಗೆ ತಿಳಿಸಿ, ಅವುಗಳ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಸಹ ತಿಳಿಸಿದರು.
ಕರ್ನಾಟಕದಲ್ಲಿ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿಯನ್ನು ಸಮರ್ಥವಾಗಿ ಮತ್ತು ಅಂತರ್ಗತವಾಗಿ ಕೈಗೊಳ್ಳುವುದರ ಬಗ್ಗೆ ಖಾತ್ರಿಪಡಿಸಿದರು.

ಇದರಿಂದ ರಾಷ್ಟ್ರ ಮತ್ತು ರಾಜ್ಯಗಳ ಬಂದರುಗಳ ಅಭಿವೃದ್ಧಿಯಿಂದ ದೇಶದ ಆರ್ಥಿಕ ಬೆಳವಣಿಗೆ ಹೆಚ್ಚಿಸುತ್ತದೆ ಎಂದರು.
ಇನ್ನು ಸಂವಾದ ಕಾರ್ಯಕ್ರಮದಲ್ಲಿ ಎಲ್ಲಾ ಪಾಲುದಾರರು ಮುಕ್ತವಾಗಿ ಚರ್ಚೆ ನಡೆಸಿದರು.ಈ ಕಾರ್ಯಕ್ರಮದಲ್ಲಿ ಬಂದರುಗಳ ನಿರ್ದೇಶಕ ಮತ್ತು ಕರ್ನಾಟಕ ಜಲಸಾರಿಗೆ ಮಂಡಳಿಯ ಸದಸ್ಯ ಕ್ಯಾಪ್ಟನ್ ಸ್ವಾಮಿ ಸಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಚೀಫ್ ಇಂಜಿನಿಯರ್ ಪ್ರವೀತ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಟಿ.ಎಸ್ ಥಾರನಾಥ ರಾಥೋಡ್, ಮೀನುಗಾರಿಕೆ ಇಲಾಖೆ, ಇಂಧನ ಇಲಾಖೆ, ಜಂಗಲ್ ಲಾಡ್ಜ್ ಗಳ ಪ್ರತಿನಿಧಿಗಳು ಮತ್ತು ಪ್ರವಾಸೋದ್ಯಮ ಅಧಿಕಾರಿಗಳು ಸೇರಿದಂತೆ ಕರ್ನಾಟಕ ಜಲಸಾರಿಗೆ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು