7:50 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್

24/04/2026, 10:39

ಬೆಂಗಳೂರು(reporterkarnataka.com): ರಾಜ್ಯದ ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸೇವೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ರಾಜ್ಯದ 39 ಸರ್ಕಾರಿ ಜಿಲ್ಲಾ, ತಾಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಲಭ್ಯವಿರಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದ ಆರೋಗ್ಯ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೇವಲ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಶಸ್ತ್ರಚಿಕಿತ್ಸೆ ಲಭ್ಯವಿತ್ತು. ಈಗ ಹೆಚ್ಚುವರಿಯಾಗಿ 22 ಆಸ್ಪತ್ರೆಗಳನ್ನು ಸೇರ್ಪಡಿಸುವ ಮೂಲಕ ಒಟ್ಟು 39 ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಖಾಸಗಿ ಅವಲಂಬನೆಗೆ ಬ್ರೇಕ್: ಹಿಂದೆ ಶೇ. 63ರಷ್ಟು ರೋಗಿಗಳನ್ನು ಸರ್ಕಾರಿ ವೈದ್ಯರೇ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಿದ್ದರು. ಇದರಿಂದ ಬಡವರಿಗೆ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟವಾಗುತ್ತಿತ್ತು. ಇದನ್ನು ತಪ್ಪಿಸಲು ಸರ್ಕಾರಿ ಆಸ್ಪತ್ರೆಗಳಲ್ಲೇ ಅತ್ಯಾಧುನಿಕ ಸೌಲಭ್ಯ ಒದಗಿಸಲಾಗಿದೆ.
2023-24ರಲ್ಲಿ ಕೇವಲ 633 ಇದ್ದ ಶಸ್ತ್ರಚಿಕಿತ್ಸೆಗಳ ಸಂಖ್ಯೆ, 2025-26ರ ಆರ್ಥಿಕ ವರ್ಷದಲ್ಲಿ 1,119ಕ್ಕೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆಗಳ ಪಾಲು ಶೇ. 35 ರಿಂದ ಶೇ. 99ಕ್ಕೆ ಏರಿದೆ.ಪರಿಣಿತ ಮೂಳೆ ಶಸ್ತ್ರಚಿಕಿತ್ಸಕರನ್ನು ನಿಯೋಜಿಸಲಾಗಿದೆ ಮತ್ತು ಅಲ್ಲಿನ ವೈದ್ಯರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಅಲ್ಲದೆ, ಇಂಪ್ಲಾಂಟ್ ಹಾಗೂ ಉಪಕರಣಗಳ ಗುಣಮಟ್ಟದಲ್ಲಿ ಸುಧಾರಣೆ ತರಲಾಗಿದೆ.

*ಸಂಪೂರ್ಣ ಆರೈಕೆ:* ಶಸ್ತ್ರಚಿಕಿತ್ಸೆಯ ನಂತರದ ಫಿಸಿಯೋಥೆರಪಿ, ಕಾಲ್ ಸೆಂಟರ್ ಮಾನಿಟರಿಂಗ್ ಮತ್ತು ಜಿಲ್ಲಾ ಮಟ್ಟದ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಇದರಿಂದ ರೋಗಿಗಳು ಚಿಕಿತ್ಸೆಗಾಗಿ 300-500 ಕಿ.ಮೀ ಪ್ರಯಾಣಿಸುವುದು ತಪ್ಪಿದಂತಾಗಿದೆ.
ಸಾರ್ವಜನಿಕರು ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗದೆ, ಸರ್ಕಾರಿ ಆಸ್ಪತ್ರೆಗಳಲ್ಲಿರುವ ಉಚಿತ ಹಾಗೂ ಗುಣಮಟ್ಟದ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು