ಇತ್ತೀಚಿನ ಸುದ್ದಿ
ಕೊಚ್ಚಿ; ದುಬೈಯಿಂದ ಸಂಚರಿಸುತ್ತಿದ್ದ ವಿಮಾನದಲ್ಲಿ ಪ್ರಜ್ಞಾಹೀನರಾದ ಮಹಿಳೆ ಮೃತ್ಯು
12/09/2022, 23:47
ಕೊಚ್ಚಿ(reporterkarnataka.com): ದುಬೈನಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪ್ರಜ್ಞಾಹೀನರಾಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಿನಿ(56) ಮಹಿಳೆ ಎಂದು ಗುರುತಿಸಲಾಗಿದೆ.
ಇವರು ವಿಮಾನದ ಮೂಲಕ ದುಬೈನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಏಕಾಏಕಿ ಅವರು ಪ್ರಜ್ಞಾಹೀನರಾಗಿದ್ದಾರೆ. ವಿಮಾನ ಲ್ಯಾಂಡ್ ಆದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ, ಆಗಲೇ ಅವರು ವೈದ್ಯರಾಗಿ ಕಾಣಿಸಿಕೊಂಡಿದ್ದಾರೆ.
ಮೃತ ಮಹಿಳೆ ಹಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಈ ಬಗ್ಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.













