5:06 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೊಡಗು: ಜೂ.25 ರವರೆಗೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ

16/06/2026, 20:51

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31 ಮತ್ತು ಇತರೆ ಸಂಬಂಧಿತ ಕಾಯ್ದೆಗಳಡಿ ದತ್ತವಾದ ಅಧಿಕಾರದಂತೆ ಕೊಡಗು ಜಿಲ್ಲೆಯಾದ್ಯಂತ ಜೂನ್, 10ರಿಂದ ಜುಲೈ 9 ರವರೆಗೆ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.
ಆದರೆ, ಪ್ರಸ್ತುತ ಕೋರಿಕೆಯಂತೆ ಹಾಗೂ ಹಾಲಿ ಜಿಲ್ಲೆಯಲ್ಲಿನ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ, ಭಾಗಶಃ ಮಾರ್ಪಡಿಸಿ ಎಲ್ಲಾ ವಿಧದ ವಾಹನಗಳ ಸಂಚಾರಕ್ಕೆ ಜೂನ್, 25 ರವರೆಗೆ ಅವಕಾಶ ನೀಡಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು