6:19 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Kodagu | ಸುಂಟಿಕೊಪ್ಪ ಸಮೀಪದ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; ಕಾರಿನ ಚಾಲಕ ಗಂಭೀರ

25/11/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕನಿಗೆ ಗಂಭೀರ ಗಾಯಗೊಂಡ ಘಟನೆ ಸುಂಟಿಕೊಪ್ಪ ಸಮೀಪದ ಶಾಂತಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ‌.
ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಪವರ್ ಪ್ಲಸ್ ಬಸ್ ಮತ್ತು ಮಡಿಕೇರಿ ಕಡೆಗೆ ಬರುತ್ತಿದ್ದ ವ್ಯಾಗನರ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಬಲಭಾಗದ ಟಯರ್ ಕಿತ್ತು ರಸ್ತೆ ಬದಿಗೆ ಹಾರಿ ಬಿದ್ದಿದೆ‌. ಅಲ್ಲದೇ ಕಾರಿನ ಮುಂಭಾಗ ಜಖಂಗೊಂಡಿದೆ‌.
ಗಾಯಾಳುವನ್ನು ಜಿಲ್ಲಾಸ್ಪತ್ರೆ ಮಡಿಕೇರಿಗೆ ಸಾಗಿಸಲಾಗಿದೆ. ಸುಂಟಿಕೊಪ್ಪ ಠಾಣೆಯ ಎಎಸ್ಐ ಸೈಮನ್ ಮತ್ತು ಹೆದ್ದಾರಿ ಗಸ್ತು ಪಡೆಯ ಎಎಸ್ಐ ಶೇಷಪ್ಪ ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿದ್ದಾರೆ.
ಕಾರು ಚಾಲಕನ ಅತೀವೇಗ ಮತ್ತು ಅಜಾಗರೂಕತೆಯೇ ಈ ಅಪಘಾತಕ್ಮೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ಸಾರೆ.
ಅಪಘಾತದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು