12:01 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಕೊಡಗಿ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ: ಪತ್ನಿ ಗಂಭೀರ, ಇಬ್ಬರು ಮಕ್ಕಳು ಪಾರು

08/02/2026, 11:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿಯೊಬ್ಬರು, ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಕಿ ಹಚ್ಚಿಕೊಂಡಿದ್ದು, ಇವರ ಪೈಕಿ
ಉದ್ಯಮಿ ಸಾವನ್ನಪ್ಪಿದ್ದರೆ, ಪತ್ನಿ ಹಾಗೂ ಮಕ್ಕಳು ಪಾರಾಗಿದ್ದಾರೆ.
ಈ ದುರಂತದಲ್ಲಿ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಇವರ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ನಡೆದಿದ್ದೇನು:?*
ಉದ್ಯಮಿ ಸಜೀರ್​​​, ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು