ಇತ್ತೀಚಿನ ಸುದ್ದಿ
Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು
16/10/2025, 17:37

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@ail.com
ಮಡಿಕೇರಿ ತಾಲೂಕಿನ ಪವಿತ್ರ ಕ್ಷೇತ್ರ ಕಾವೇರಿ ಉಗಮಸ್ಥಾನ ತಲ ಕಾವೇರಿಯಲ್ಲಿ ಅ.17ರಂದು(ನಾಳೆ) ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕೊಡಗಿನ ಕುಲದೇವಿ ಮಾತೆ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ.
ಭಾಗಮಂಡಲ ಕಾವೇರಿ ಜೂನಿಯರ್ ಕಾಲೇಜಿನ ಹೆಲಿಪ್ಯಾಡ್‌ಗೆ ಮಧ್ಯಾಹ್ನ 12.30 ಗಂಟೆಗೆ ಆಗಮಿಸಲಿರುವ ಡಿಸಿಎಂ, ಡಿ.ಕೆ.ಶಿವಕುಮಾರ್, ಸಸಚಿವರಾದ ರಾಮಲಿಂಗಾ ರೆಡ್ಡಿ, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ. ಮಂತರ್ ಗೌಡ ಸೇರಿದಂತೆ ಇತರ ಗಣ್ಯರು ಸಾಥ್ ನೀಡಲಿದ್ದಾರೆ.