ಇತ್ತೀಚಿನ ಸುದ್ದಿ
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು
05/11/2025, 09:04
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ – ಮಂಗಳೂರು ರಸ್ತೆಯ ತಾಳತ್ ಮನೆ ಬಳಿ ಡಸ್ಟರ್ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗಲಿರುವ ಘಟನೆ ನಡೆದಿದೆ. ಇದೇ ಮಾರ್ಗದಲ್ಲಿ ಇದು ಮೂರನೇ ಘಟನೆಯಾಗಿದೆ ಎಂದು ಹೇಳಲಾಗಿದೆ.
ಡಸ್ಟರ್ ಕಾರು ಯಾರದೆಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸುವೆ. ಅಗ್ನಿಶಾಮಕ ದಳದವರು ನಂತರ ಬಂದು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದರು.












