ಇತ್ತೀಚಿನ ಸುದ್ದಿ
ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ
29/01/2026, 22:59
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಆನೆ ಮಾನವ ಸಂಘರ್ಷ ಮುಂದುವರೆದಿದೆ.ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮಿಪದ ಗೌರಿಬೆಟ್ಟ ಕಾಫಿ ತೋಟದಲ್ಲಿಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತಿದ್ದ ಲತೀಫ್ (65) ಎಂಬುವರ ಮೇಲೆ ದಾಳಿ ನಡೆಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧ್ಯಾಹ್ನದ ವೇಳೆ ಕಾಫಿ ತೋಟದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದುಕಾರ್ಮಿಕ ಲತೀಫ್ ಮೇಲೆ ದಾಳಿ ಮಾಡಿ
ಬಲಿ ತೆಗೆದುಕೊಂದಿದೆ.ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದು ಈ ವೇಳೆ ಅರಣ್ಯ ಇಲಾಖೆ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸಹ ನಡೆದಿದೆ.













