8:59 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಕೊಡಗು ಜೂನಿಯರ್ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಪ್ರಿನ್ಸಿಪಾಲರ ವಿರುದ್ಧ ದೂರು ದಾಖಲು

20/02/2022, 10:22

ಮಡಿಕೇರಿ(reporterkarnataka.com): ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಟಿವಿ ಮಾಧ್ಯಮದ ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿಗೆ ಮಡಿಕೇರಿಯ ಮುಸ್ಲಿಂ ಜಮಾಅತ್ ಗಳ ಒಕ್ಕೂಟದಿಂದ ದೂರು ನೀಡಲಾಗಿದೆ.

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಟಿವಿ ಕ್ಯಾಮೆರಾಗಳ ಮುಂದೆ ಏರು ಧ್ವನಿಯಲ್ಲಿ ಗದರಿಸಿ, ಎಫ್ ಐಆರ್ ದಾಖಲಿಸುವ ಬೆದರಿಕೆಯನ್ನು ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯದಲ್ಲಿ, ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿರುವುದು ಸ್ಪಷ್ಟವಾಗಿದ್ದು, ಇದು ಜೆ.ಜೆ ಕಾಯ್ದೆ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಘಟನೆಯನ್ನು ಚಿತ್ರೀಕರಿಸಲು ಅವಕಾಶ ಮಾಡಿಕೊಟ್ಟು, ಸಾರ್ವಜನಿಕವಾಗಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತಂದಿರುವ ಸದರಿ ವ್ಯಕ್ತಿಯ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಿರುವ ಟಿವಿ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು