4:07 AM Wednesday28 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಕೊಡಗು ಜೂನಿಯರ್ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಪ್ರಿನ್ಸಿಪಾಲರ ವಿರುದ್ಧ ದೂರು ದಾಖಲು

20/02/2022, 10:22

ಮಡಿಕೇರಿ(reporterkarnataka.com): ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಟಿವಿ ಮಾಧ್ಯಮದ ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿಗೆ ಮಡಿಕೇರಿಯ ಮುಸ್ಲಿಂ ಜಮಾಅತ್ ಗಳ ಒಕ್ಕೂಟದಿಂದ ದೂರು ನೀಡಲಾಗಿದೆ.

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಟಿವಿ ಕ್ಯಾಮೆರಾಗಳ ಮುಂದೆ ಏರು ಧ್ವನಿಯಲ್ಲಿ ಗದರಿಸಿ, ಎಫ್ ಐಆರ್ ದಾಖಲಿಸುವ ಬೆದರಿಕೆಯನ್ನು ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯದಲ್ಲಿ, ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿರುವುದು ಸ್ಪಷ್ಟವಾಗಿದ್ದು, ಇದು ಜೆ.ಜೆ ಕಾಯ್ದೆ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಘಟನೆಯನ್ನು ಚಿತ್ರೀಕರಿಸಲು ಅವಕಾಶ ಮಾಡಿಕೊಟ್ಟು, ಸಾರ್ವಜನಿಕವಾಗಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತಂದಿರುವ ಸದರಿ ವ್ಯಕ್ತಿಯ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಿರುವ ಟಿವಿ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು