ಇತ್ತೀಚಿನ ಸುದ್ದಿ
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು
08/02/2026, 12:00
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕುಶಾಲನಗರ ಸಮೀಪದ ಆನೆಕಾಡು ಬಳಿ ರಸ್ತೆಯಲ್ಲೇ ಕ್ರೇಟಾ ಕಾರು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಲಿಸುತ್ತಿದ್ದ ಪ್ರವಾಸಿ ಕಾರಿನಲ್ಲಿ ಅಗ್ನಿ ಅವಘಡ ರಾತ್ರಿ 9.45 ರ ಸಮಯದಲ್ಲಿ ಆನೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಐವರು ಪ್ರವಾಸಿಗರು ಹುಂಡೈ ಕ್ರೇಟಾ ಕಾರಿನಲ್ಲಿ ಮಡಿಕೇರಿಯಿಂದ ಕುಶಾಲನಗರ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭ ಮಾರ್ಗಮಧ್ಯದ ಆನೆಕಾಡು ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅದರೊಳಗೆ ಇದ್ದವರು ಹೊರಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಅಗ್ನಿಯ ಕೆನ್ನಾಲಿಗೆಗೆ ಕಾರು ಧಹಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.












