5:25 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: ಬೀದಿನಾಯಿ ದಾಳಿಗೆ ಜಿಂಕೆ ಬಲಿ

18/10/2025, 20:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmaill.com

ಕುಶಾಲನಗರ ತಾಲ್ಲೂಕಿನ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ಆನೆಕಾಡು ಅರಣ್ಯ ಪ್ರದೇಶದಲ್ಲಿ ಬೀದಿ ನಾಯಿಗಳು ದಾಳಿ ನಡೆಸಿ ಜಿಂಕೆಯೊಂದನ್ನು ಕೊಂದು ಹಾಕಿದ್ದು, ಅದರ ಕಳೆಬರಹ ಪತ್ತೆಯಾಗಿದೆ‌.
ಆನೆಕಾಡು ಅರಣ್ಯ ಪ್ರದೇಶಕ್ಕೆ ಸೇರಿದ ಅಂದಾಜು 20 ವರ್ಷ ಪ್ರಾಯದ ಜಿಂಕೆಯೊಂದರ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಕೊಂದು ಹಾಕಿದ್ದು, ಜಿಂಕೆಯ ಕಳೆಬರಹವು ಅರಣ್ಯದಂಚಿನ ಆನೆ ಕಂದಕದಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆನೆಕಾಡು ಅರಣ್ಯ ಇಲಾಖೆಯ ಅರಣ್ಯ ಅಧಿಕಾರಿ ದೇವಯ್ಯ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು