8:27 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ

04/04/2026, 22:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸಮೀಪದ ಹರದೂರು ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಹರದೂರು – ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿಯವರು ಚಾಲನೆ ನೀಡಲಾಯಿತು.
ಕಾಜೂರು ಉರೂಸ್ ಮಕಾಂ ನಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಉರೂಂ ಯಶಸ್ವಿಯಾಗಿ ನಡೆಯಲು ಪ್ರಾರ್ಥಿಸಿದರು.
ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸುಲೈಮಾನ್ ಸಖಾಫಿ ಮಾತನಾಡಿ, ಉರೂಸ್ ಗೆ ಚಾಲನೆ ನೀಡಲಾಗಿದ್ದು, ಸೋಮವಾರದಂದು ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲರೂ ಉರೂಸ್ ನಲ್ಲಿ ಭಾಗವಹಿಸುವ ಮೂಲಕ ಉರೂಸನ್ನು ಯಶಸ್ವಿಗೊಳಿಸಬೇಕು ಎಂದರು.
ಹರದೂರು ಗ್ರಾ‌ಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎ.ಮುಸ್ತಫಾ ಮಾತನಾಡಿ, ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕಾಜೂರು ಮಕಾಂ ಉರೂಸ್ ಗೆ ಇಂದು ಚಾಲನೆ ನೀಡಲಾಗಿದೆ. ಉರೂಸ್ ಕೊಡಗಿನ ಎಲ್ಲಾ ಕಡೆಗಳಿಂದಲೂ ಜನರು ಪಾಲ್ಗೊಳ್ಳುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ‌ ಜನರು ಆಗಮಿಸಿ ಉರೂಸ್ ನ‌ ಯಶಸ್ವಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಈ ಸಂದರ್ಭ ಮಸ್ಜಿದುನ್ನೂರು ಮುಸ್ಲಿಂ ಜಮಾಅತ್ ಕಮಿಟಿ‌ ಅಧ್ಯಕ್ಷರಾದ ಅಬ್ದುಲ್ಲಾ, ಕಾರ್ಯದರ್ಶಿ ಅಜ಼ೀಜ಼್, ಖಜಾಂಜಿ ಜ಼ಕ್ರಿಯಾ, ಪ್ರಮುಖರಾದ ಯಾಕೂಬ್, ಉಮರ್ ಹಾಜಿ, ಸೈದು, ರಜ಼ಾಕ್, ಕಾದರ್, ಸಿದ್ದೀಕ್, ಕೆ.ಬಿ.ಶಂಶುದ್ಧೀನ್ ಹಾಗೂ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು