7:28 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ: ಕಾರಿನೊಳಗೆ ಸಾವರ್ಕರ್ ಫೋಟೋ ಎಸೆತ

18/08/2022, 18:00

ಕವಿತಾ ಪೊನ್ನಪ್ಪ ಭಾಗಮಂಡಲ ಮಡಿಕೇರಿ

info.reporterkarnataka@gmail.com

ಮಳೆ ಹಾನಿ‌ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ಪ್ರತಿಭಟನಾಕಾರರು ಗೋ ಬ್ಯಾಕ್ ಸಿದ್ದರಾಮಯ್ಯ ಎಂಬ ಘೋಷಣೆ ಕೂಗಿದರು.

ಸಿದ್ದರಾಮಯ್ಯ ಅವರು ಕೊಡಗು ಪ್ರವೇಶಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟಿಸಿದರು.

ಸಿದ್ದರಾಮಯ್ಯ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಕಾರ್ಯಕರ್ತರು, ಸಾವರ್ಕರ್ ಫೋಟೋ ಹಿಡಿದು ಘೋಷಣೆ ಕೂಗಿದರು. ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನ ಪಕ್ಕಕ್ಕೆ ಬಂದ ಕಾರ್ಯಕರ್ತರು ಅವರು ಕೂತಿರುವ ಜಾಗಕ್ಕೆ ಸಾವರ್ಕರ್ ಫೋಟೋ ಎಸೆದರು. ಸ್ಥಳದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು. ಮಾಜಿ ಮುಖ್ಯಮಂತ್ರಿಗಳಿಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಲ್ಲಿ ಕೊಡಗು ಪೊಲೀಸ್ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು