4:31 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ

14/02/2026, 17:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿರುವ ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧಿಸಲಾಗಿದೆ.
ನಗರಸಭೆ ವ್ಯಾಪ್ತಿಯಲ್ಲಿ ಇರುವ 23 ವಾರ್ಡ್‍ಗಳನ್ನು ಸರ್ಕಾರ ಸೂಚಿಸಿರುವಂತೆ ಒಡಿಎಫ್ ಪ್ರೋಟೋಕಾಲ್ ಮತ್ತು ಒಡಿಎಫ್+(ಬಯಲು ಶೌಚಾಲಯ ಮುಕ್ತ ಪ್ರದೇಶ) ಶಿಷ್ಟಾಚಾರಗಳಂತೆ ಕ್ರಮ ಅನುಸರಿಸಿ ಘೋಷಣಾ ಪತ್ರ ಪಡೆಯಲಾಗಿದೆ. ಅದರಂತೆ ಈ ಪ್ರಕಟಣೆಯನ್ನು ಸಾರ್ವಜನಿಕ ಮಾಹಿತಿಗಾಗಿ ಪ್ರಚಾರಪಡಿಸಲಾಗಿದ್ದು, ಒಡಿಎಪ್ ಪ್ರೋಟೋಕಾಲ್ ಮತ್ತು ಒಡಿಎಫ್+ (ಬಯಲು ಶೌಚಾಲಯ ಮುಕ್ತ ಪ್ರದೇಶ) ಈಗಾಗಲೇ ಘೋಷಿಸಲಾಗಿದೆ.

ಈ ಸಂಬಂಧ ಬಯಲು ಪ್ರದೇಶದಲ್ಲಿ ಮಲಮೂತ್ರ ವಿಸರ್ಜನೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನೆ ಅಥವಾ ವಾಣಿಜ್ಯ ಪ್ರದೇಶಗಳಿಂದ ಮಲ ಮೂತ್ರದ ತ್ಯಾಜ್ಯವನ್ನು ಚರಂಡಿಗೆ ಹರಿಸಿದಲ್ಲಿ ಬಯಲು ಮೂತ್ರ ವಿಸರ್ಜನೆ ರೂ.500, ಬಯಲು ಮಲ ವಿಸರ್ಜನೆ ರೂ.1,000 ಹಾಗೂ ಸಾರ್ವಜನಿಕ ಚರಂಡಿಗೆ ಮಲ ತ್ಯಾಜ್ಯ ಹರಿಸಿದ್ದಲ್ಲಿ ರೂ.2 ಸಾವಿರ ದಂಡವಿಧಿಸಿ, ಕಾನೂನು ಕ್ರಮವಹಿಸಲಾಗುವುದು. ಮಡಿಕೇರಿ ನಗರಸಭೆಯ ವ್ಯಾಪ್ತಿಯಲ್ಲಿನ ವಸತಿ/ ವಾಣಿಜ್ಯ ಕಟ್ಟಡ ಹೊಂದಿರುವ ಮಾಲೀಕರು ಸೆಪ್ಟಿಕ್ ಟ್ಯಾಂಕ್‍ಗಳನ್ನು ಸ್ವಚ್ಛಗೊಳಿಸಲು ನಗರಸಭೆಯ ಸಕ್ಕಿಂಗ್ ಯಂತ್ರವನ್ನು ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು