8:28 PM Wednesday16 - September 2026
ಬ್ರೇಕಿಂಗ್ ನ್ಯೂಸ್
ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ…

ಇತ್ತೀಚಿನ ಸುದ್ದಿ

*Kodagu | ಬಿಜೆಪಿ ತೊರೆದು 40ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ*

16/09/2026, 20:15

ಗಿರಿಧರ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ 40ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್ ಅವರ ನೇತೃತ್ವದಲ್ಲಿ ಇಂದು 40ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು, ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.ಎಲ್ಲರಿಗೂ ಪಕ್ಷದ ಶಲ್ಯ ಹೊದಿಸಿ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು.

ಪಕ್ಷ ಸೇರ್ಪಡೆಗೊಂಡ ಪ್ರಮುಖರು ಮಾತನಾಡಿ, ಶಾಸಕರು ಮಾಡುತ್ತಿರುವ ಸಮಾಜಮುಖಿ ಕಾರ್ಯ ಹಾಗೂ ಜನಪರ ಕಾಳಜಿಯನ್ನು ಮೆಚ್ಚಿ ಅವರಿಗೆ ಮತ್ತಷ್ಟು ಬಲ ನೀಡುವ ಸಲುವಾಗಿ ತಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದರು.
ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಅಪ್ಪಚಂಗಡ ಪಿ. ಮೋಟಯ್ಯ, ತಿತೀರ ಪ್ರಭು, ಪೆಮ್ಮಂಡ ಅರುಣಾ, ಚೊಟ್ಟೆಯಾಂಡಮಡ ವಿಶು, ಕುಪ್ಪಣ್ಣಮಡ ಪ್ರೀತಮ್, ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಹರೀಶ್ ಪೂವಯ್ಯ, ಬೊಟ್ಟಂಗಡ ಜಗದೀಶ್, ರೋಬಿನ್, ಕಟ್ಟೇರ ಗಣೇಶ, ಕಳಕಂಡ ಜೀತು, ಅಣ್ಣಿರ ಹರೀಶ್,ಬೋಪಯ್ಯ, ಮಹಾದೇವ, ನಾಸಿರ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು