10:01 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ ಕಾಡಿಗೆ

13/07/2025, 11:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterarnataka@gmail.com

ವಿರಾಜಪೇಟೆ ವಿಭಾಗದ ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಸಲುವಾಗಿ ಹಮ್ಮಿಕೊಂಡಿದ್ದ 2 ದಿನಗಳ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ ಗುಂಪು ಸೇರಿ ಒಟ್ಟು 18 ಕಾಡಾನೆಗಳನ್ನು ಯಶಸ್ವಿಯಾಗಿ ಕಾಡಿಗೆ ಅಟ್ಟಲಾಗಿರುತ್ತದೆ.
ಜುಲೈ 10ರಂದು ಮಾಯಮುಡಿ ಗ್ರಾಮದ ಅಂಬುಕೋಟೆಯಿಂದ ಅನನ್ಯ ಗುಂಪಿಗೆ ಸೇರಿದ 7 ಕಾಡಾನೆಗಳು ಹಾಗೂ ಮಾಯಮುಡಿ ಗ್ರಾಮ ಪಂಚಾಯಿತಿ ಬಳಿಯಿಂದ 2 ಗಂಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಕಾಡಾನೆಗಳನ್ನು ದೇವಮಚ್ಚಿಯ ಬಳಿ ಮಾವುಕಲ್‌ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿರುತ್ತದೆ.
ಜುಲೈ 11ರಂದು ಅರವತೊಕ್ಲು ಗ್ರಾಮದಲ್ಲಿ ಬೀಡುಬಿಟ್ಟಿದ್ದ NE-4 ಗುಂಪಿನ 9 ಕಾಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಕಾಡಾನೆಗಳನ್ನು ನೊಖ್ಯಸಿದ್ದಾಪುರ ಗ್ರಾಮದ ಕುಂಜುರಾಮನ ಕಟ್ಟೆ ಬಳಿ ಅರಿಕೇರಿ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣರವರ ಸೂಚನೆಯ ಮೇರೆಗೆ ಎನ್. ಜಗನ್ನಾಥ್‌, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ವಿರಾಜಪೇಟೆ ವಿಭಾಗರವರ ಮಾರ್ಗದರ್ಶನದಲ್ಲಿ ಕೆ.ಪಿ. ಗೋಪಾಲ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ತಿತಿಮತಿ ಉಪ ವಿಭಾಗರವರ ನೇತೃತ್ವದಲ್ಲಿ ಕೈಗೊಳ್ಳಲಾಗಿತ್ತು. ಅಲ್ಲದೇ ತಿತಿಮತಿ ಪ್ರಾದೇಶಿಕ ವಲಯ, ಆನೆಚೌಕೂರು ವನ್ಯಜೀವಿ ವಲಯ, ತಿತಿಮತಿ ಆನೆ ಕಾರ್ಯಪಡೆ, ಪೊನ್ನಂಪೇಟೆ ವಲಯ ಹಾಗೂ ಮಾಕುಟ್ಟ ವನ್ಯಜೀವಿ ವಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು