8:48 AM Wednesday11 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ದಾರುಣ ಸಾವು

17/11/2025, 18:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಕಾಲುವೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಕೊಣನೂರು ಗ್ರಾಮದಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಲಕ್ಷ್ಮಿಪುರ ಗ್ರಾಮದ ಹರೀಶ್ ಅವರ ಮಗ ಲವ ಎಂಬವ ಸಾವಿಗೀಡಾ ಬಾಲಕ. ಈತ ಬೆಟ್ಟದಪುರ ಗ್ರಾಮಕ್ಕೆ ತನ್ನ ಅತ್ತೆ ಪುಟ್ಟಮ್ಮ ಅವರ ಮನೆಗೆ ಹಬ್ಬಕ್ಕೆ ಬಂದಿದ್ದು ಪಕ್ಕದಲ್ಲಿ ಇರುವ ಕರಡಿ ಲಕ್ಕನಕೆರೆ ಏತ ನೀರಾವರಿ ಕಾಲುವೆಗೆ ಈಜಲು ಹೋಗಿ ಮೃತಪಟ್ಟಿದ್ದಾನೆ.
ಲವನ ತಂದೆ ತಾಯಿ ಈ ಹಿಂದೆ ಮೃತ ಪಟ್ಟಿದ್ದು ಅನಾಥನಾಗಿದ್ದ ಈತ ಕೂಡ ಈಜಲು ಹೋಗಿ ದುರ್ಮರಣ ಹೊಂದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮೃತ ಲವನ ಮಾವ ಸಿದ್ದರಾಮ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಳುಗು ಈಜು ತಜ್ಞರನ್ನು ಕರೆಸಿ, ಶವವನ್ನು ಹೊರಗೆ ತೆಗೆದು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು