12:37 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Kodagu | ಪಿರಿಯಾಪಟ್ಟಣ: ಒಂದೇ ದಿನ 430 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಅರ್ಪಣೆ

27/04/2025, 12:04

ಪಿರಿಯಾಪಟ್ಟಣ(reporterkarnataka.com): ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.
ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.


ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ವಿವರಿಸಿದರು.
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದರು.
ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಟೀಕಿಸಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು ಜನರ ದಿಕ್ಕು ತಪ್ಪಿಸಿ ಕಾಲ‌ ಕಳೆದು ಮನೆಗೆ ಹೋದರು ಎಂದು ವಿವರಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು