8:08 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

Kodagu | ಸುರಕ್ಷಿತ ಸಹಜ ಹೆರಿಗೆ: ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ 2ನೇ ಸ್ಥಾನ

21/12/2025, 20:07

*ಜಿಲ್ಲೆಯಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆ ಪ್ರಥಮ*

*ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದ್ವಿತೀಯ ಸ್ಥಾನ*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸಹಜ ಹೆರಿಗೆಯಲ್ಲಿ ಕೊಡಗು ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಹಾಗೆ ಕೊಡಗಿನಲ್ಲಿ ಮೊದಲನೇ ಸ್ಥಾನ ಜಿಲ್ಲಾ ಆಸ್ಪತ್ರೆ ಮಡಿಕೇರಿಯಾದರೆ, ದ್ವಿತೀಯ ಸ್ಥಾನ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ ಪಡೆದುಕೊಂಡಿದೆ.
ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ, ಕುಶಾಲನಗರ ವಿರಾಜಪೇಟೆ ತಾಲೂಕು ಆಸ್ಪತ್ರೆಗಳಿದ್ದರು ಹೆಚ್ಚಿನ ಹೆರಿಗೆ ಗೋಣಿಕೊಪ್ಪಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ. ಇಲ್ಲಿನ ಸ್ತ್ರೀ ರೋಗ ತಜ್ಞರಾದ ಗ್ರೀಷ್ಮ ಭೋಜಮ್ಮ , ಹಾಗೂ ಅರವಳಿಕೆ ತಜ್ಞರಾದ ಡಾಕ್ಟರ್ ಸುರೇಶ್ ಇಬ್ಬರೇ ವೈದ್ಯರು ಪ್ರತಿನಿತ್ಯ ನೂರಕ್ಕೂ ಹೆಚ್ಚು ಹೊರರೋಗಿಗಳನ್ನು ಪರೀಕ್ಷಿಸುತ್ತ ಹಗಲು ಹಾಗೂ ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುತ್ತಾ ಸಹಜ ಹೆರಿಗೆ ಹಾಗೂ ಸಿಸೇರಿಯನ್ ಕೂಡ ನಡೆಸಿ ದಾಖಲೆ ಬರೆದಿದ್ದಾರೆ.
ಈ ಬಾರಿ ಸಹಜ ಹೆರಿಗೆ 452 ಹಾಗೂ ಸಿಸೇರಿಯನ್ 158 ಒಟ್ಟು 610 ದಾಖಲಾಗಿದೆ. ಇಲ್ಲಿರುವ ದಾದಿಯರ ಪರಿಶ್ರಮ, ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯಿಂದ ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯ ಸೇವೆಯಲ್ಲಿ ಹೆಸರು ಪಡೆದಿದೆ.
ಕಳೆದ ಎರಡು ತಿಂಗಳ ಹಿಂದೆ ಸಾಮೂಹಿಕ ವರ್ಗಾವಣೆಯಲ್ಲಿ ಈ ಇಬ್ಬರು ವ್ಯದ್ಯರನ್ನು ಬೇರೆ ಕಡೆ ವರ್ಗಾಯಿಸಲಾಗಿತ್ತು. ಹಾಗೆ ಬದಲಿ ವ್ಯದ್ಯರನ್ನು ಇಲ್ಲಿ ನೇಮಿಸದೆ,ಈ ಭಾಗದ ಜನರು ಕಂಗಾಲಾಗಿದ್ದಾಗ, ಶಾಸಕರಾದ ಎ. ಎಸ್ ಪೊನ್ನಣ್ಣ, ಗ್ಯಾರೆಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಧರ್ಮಜಾ ಉತ್ತಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಸತೀಶ್ ಹಾಗೂ ತಾಲೂಕು ವೈದ್ಯಧಿಕಾರಿ ಡಾ..ಯತಿರಾಜ್ ರವರು ಇಲ್ಲಿನ ಸಮಸ್ಯೆಗಳನ್ನು, ಹಾಗೂ ಈ ಆಸ್ಪತ್ರೆಯ ಪ್ರಗತಿಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟ ಪರಿಣಾಮ ವರ್ಗಾವಣೆಗೊಂಡ ಇಬ್ಬರು ವೈದ್ಯರನ್ನು ಮತ್ತೆ ಪುನಃ ಈ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮರು ನೇಮಕಗೊಳಿಸಿ ಆದೇಶ ಹೊರಡಿಸಿದ್ದರು. ಕಳೆದ 12ಕ್ಕೂ ಹೆಚ್ಚು ವರ್ಷಗಳಿಂದ ಈ ಇಬ್ಬರು ವೈದ್ಯರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಿಬ್ಬಂದಿಗಳ ಸಹಕಾರದಿಂದ ಗರ್ಭಿಣಿ ಸ್ತ್ರೀಯರು ಹಾಗೂ ರೋಗಿಗಳು ಸರ್ಕಾರಿ ಆಸ್ಪತ್ರೆಗಳತ್ತ ಒಲವು ತೋರಲು ಕಾರಣವಾಗಿದೆ. ಕೇವಲ ಇಬ್ಬರೇ ಖಾಯಂ ವೈದ್ಯರು ಇರುವ ಈ ಸಮುದಾಯ ಆರೋಗ್ಯ ಕೇಂದ್ರಕ್ಕೆ, ಮೂಳೆ ತಜ್ಞರು, ಕಿವಿ ಮತ್ತು ಮೂಗು ತಜ್ಞರು, ಶಸ್ತ್ರ ವೈದ್ಯರ ಅವಶ್ಯಕತೆ ಇದ್ದು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ನೇಮಕಾತಿಗೊಳಿಸಲು ಪ್ರಯತ್ನಿಸಬೇಕಾಗಿದೆ.
ಖಾಸಗಿ ಆಸ್ಪತ್ರೆಗಳ ಪೈಪೋಟಿಯ ನಡುವೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳತ್ತ ಗರ್ಭಿಣಿಯರು ಹಾಗು ರೋಗಿಗಳು ಮುಖ ಮಾಡಿರೋದು ವಿಶೇಷವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು