ಇತ್ತೀಚಿನ ಸುದ್ದಿ
Kodagu | ಸಿದ್ದಾಪುರ: ಮಹಿಳೆಯಿಂದ ಮೊಬೈಲ್ ಕದ್ದ ಆರೋಪಿಗಳಿಬ್ಬರು ಅಂದರ್
18/11/2025, 16:06
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಬಸ್ ತಂಗುದಾಣದಲ್ಲಿ ನಿಂತಿದ್ದ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟ್ಟದಹಳ್ಳ ಪಂಜರಿ ಎರವರ ಸಿದ್ದಯ್ಯ (20) ಮತ್ತು ಪಂಜರಿ ಎರವರ ಮಾದಪ್ಪ (26) ಬಂಧಿತ ಆರೋಪಿ ಗಳಾಗಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲಿಯೇರಿ ಗ್ರಾಮದ ಶೈನಿ ಡಿ. ಎಂಬುವವರು ನ. 15ರಂದು ಸಂಜೆ ಅಂದಾಜು 5 ಗಂಟೆ ಸಮಯದಲ್ಲಿ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೋಲ್ಲಿ ಟಾಟಾ ಕಾಫಿ ಎಸ್ಟೇಟ್ ಸಮೀಪದ ಜಂಕ್ಷನ್ ಬಸ್ ತಂಗುದಾಣದಲ್ಲಿ ಮಕ್ಕಳೊಂದಿಗೆ ಬಸ್ ಗಾಗಿ ಕಾಯುತ್ತಾ ನಿಂತಿದ್ದಾಗ ಇವರ
ಕೈಯಲ್ಲಿದ್ದ ಮೊಬೈಲ್ ಅನ್ನು ಆರೋಪಿಗಳು ಕಿತ್ತು ಕೊಂಡು ಪರಾರಿಯಾಗಿದ್ದರು. ಈ ಕುರಿತು ಶೈನಿ ಡಿ ಅವರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಪ್ರಕರಣದ ಆರೋಪಿಯ ಪತ್ತೆಗಾಗಿ ಮಡಿಕೇರಿ ಪೊಲೀಸ್ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ಪಿ.ಕೆ. ರಾಜು, ಸಿದ್ದಾಪುರ PSI ಮಂಜುನಾಥ್, ಠಾಣೆಯ ಅಪರಾಧ ಪತ್ತೆ ಸಿಬ್ಬಂದಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ನ. 17ರಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳು ಮಹಿಳೆಯಿಂದ ಕಳವು ಮಾಡಿದ್ದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.












