ಇತ್ತೀಚಿನ ಸುದ್ದಿ
Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ
25/11/2025, 15:49
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಅಪಘಾತಕ್ಕೆ ಈಡಾಗಿದ್ದ ಮಗನ ಸ್ಥಿತಿ ನೋಡಲಾಗದೆ ನೊಂದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ತೂಚಮಕೇರಿ ಗ್ರಾಮದಲ್ಲಿ ನಡೆದಿದೆ.



ಗ್ರಾಮದ ಸುರೇಶ್ ಎಂಬುವರ ಪತ್ನಿ ಸುಮಿತ(48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಳೆದ ಎರಡು ತಿಂಗಳ ಹಿಂದೆ ಸುಮಿತ ಅವರ ಪುತ್ರನಿಗೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಿಂದ ಮಾನಸಿಕವಾಗಿ ಸಾಕಷ್ಟು ಕುಂದಿದ್ದರು ಎನ್ನಲಾಗಿದೆ.ನವೆಂಬರ್ 23 ರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಬೆಳಗಿನ ತಿಂಡಿಗೆಂದು ಚಪಾತಿ ಹಿಟ್ಟು ಕಲಿಸಿದ್ದು ಬಳಿಕ ನಾಪತ್ತೆಯಾಗಿದ್ದರು. ಸುಮಿತ ಪತಿ ಸುರೇಶ್ ಸುತ್ತ ಮುತ್ತ ಹುಡುಕಾಟ ನಡೆಸಿದ್ದರು,ಬಳಿಕ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಗ್ರಾಮಸ್ಥರೆಲ್ಲರೂ ಹುಡುಕಾಟಕ್ಕೆ ತೊಡಗಿದ್ದಾಗ ಗ್ರಾಮದ ಅಪ್ಪಾಜಿ ಎಂಬುವವರಿಗೆ ಸೇರಿದ ಕೆರೆಯಲ್ಲಿ ಮೃತದೇಹ ಕಂಡು ಬಂದಿದ್ದು, ಸ್ಥಳೀಯರ ಸಹಾಯದಿಂದ ಮೃತದೇಹ ವನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಕುಟುಂಬಸ್ತರಿಗೆ ಹಸ್ತಾಂತರ ಮಾಡಲಾಗಿದೆ.












