ಇತ್ತೀಚಿನ ಸುದ್ದಿ
Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು
12/11/2025, 20:45
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿರಾಜಪೇಟೆ ಕೆ.ಬೋಯಿಕೇರಿ ನಿವಾಸಿ ಮಹಿಳೆ ಸಾವನ್ನಪ್ಪಿದ್ದಾರೆ.
ನಿಹಾರಿಕ ಹೋಟೆಲ್ ನ ನವೀನ ಅವರ ಪತ್ನಿ ಭವ್ಯ (32)ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧಾನರಾಗಿದ್ದಾರೆ. ಅವರು ಮನೆಯಲ್ಲಿ ವಿಷ ಸೇವನೆ ಮಾಡಿದ ಬಳಿಕ ವಿರಾಜಪೇಟೆ ಮತ್ತು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸೇರಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಾಪಟ್ಟಿದಾರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.












