ಇತ್ತೀಚಿನ ಸುದ್ದಿ
Kodagu | ವಿರಾಜಪೇಟೆ: ಕಾಫಿ ತೋಟಕ್ಕೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್; ಪ್ರಯಾಣಿಕರು ಪಾರು
07/07/2025, 10:59

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಡಿಕೇರಿಯಿಂದ ವಿರಾಜಪೇಟೆ ಮಾರ್ಗವಾಗಿ ಬೆಂಗಳೂರು-ಕೋಲಾರ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ವಿರಾಜಪೇಟೆಯ ಕಾವೇರಿ ಕಾಲೇಜು ಬಳಿಯ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಫಿ ತೋಟಕ್ಕೆ ನುಗ್ಗಿದೆ.ವ ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ.