7:25 PM Tuesday25 - November 2025
ಬ್ರೇಕಿಂಗ್ ನ್ಯೂಸ್
Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ…

ಇತ್ತೀಚಿನ ಸುದ್ದಿ

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್. ಜನಾರ್ದನ್ ನೇಮಕ

07/03/2024, 23:53

ಬೆಳ್ತಂಗಡಿ(reporterkarnataka.com): ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ನೇಮಕಗೊಂಡಿದ್ದಾರೆ.
ಅವರು ರುಡ್ ಸೆಟ್ ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560ಕ್ಕೂ ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು. ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕೂ ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕೂ ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿ ಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಅವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅಲ್ಲದೆ ಪ್ರಸ್ತುತ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು