ಇತ್ತೀಚಿನ ಸುದ್ದಿ
Kodagu | ಸಿದ್ದಾಪುರ ಸಮೀಪದ ಕರಡಿಗೋಡುವಿನಲ್ಲಿ ಕಾಡಾನೆ ದಾಳಿ: ಇಬ್ಬರು ಕಾರ್ಮಿಕರಿಗೆ ತೀವ್ರ ಗಾಯ
29/07/2025, 13:53

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಗಾಯಗೊಂಡು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕಾಡನೆ ಕರಡಿಗೋಡು ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೀಗ ಕಾರ್ಮಿಕರು ಅರಣ್ಯ ಇಲಾಖೆ ವಿರುದ್ದ ತಿರುಗಿ ಬಿದಿದ್ದು ತೀವ್ರ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಸಜ್ಜಾಗಿವೆ.