5:03 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

Kodagu | ಏಳನೇ ಹೊಸಕೋಟೆಯಲ್ಲಿ ಕಾಡಾನೆ ದಾಳಿ: ಅಪಾರ ಪ್ರಮಾಣದ ಹಾನಿ

10/04/2026, 17:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ರೊನಾಲ್ಡ್ ಡಿಸಿಲ್ವ ಅವರ ಮಾಲಿಕತ್ವದ ತೋಟಕ್ಕೆ ಕಳೆದೆರಡು ದಿನಗಳಿಂದ ಲಗ್ಗೆಯಿಡುತ್ತಿರುವ ಕಾಡಾನೆಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಜಖಂಗೊಳಿಸಿದೆ. ಹತ್ತಕ್ಕೂ ಅಧಿಕ ತೆಂಗಿನ ಮರಗಳನ್ನು ನೆಲಕ್ಕುರುಳಿಸಿದೆ. ಇದಲ್ಲದೆ ಆನೆಯನ್ನು ಕಂಡು ಬೊಗಳುತ್ತಿದ್ದ ಮನೆಯಲ್ಲಿದ್ದ ಶ್ವಾನವನ್ನು ತುಳಿದು ತೀವ್ರವಾಗಿ ಗಾಯಗೊಳಿಸಿದೆ.


ಸುತ್ತಮುತ್ತಲಿನ ಪ್ರದೇಶದಲ್ಲಿ ಅಡ್ಡಾಡಿಕೊಂಡು ಇರುವ ಆನೆಗಳು ಜನವಸತಿ ಪ್ರದೇಶದಲ್ಲಿ ಓಡಾಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಭಯ ಭೀತಿಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು