4:15 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕೋಡಿಕಲ್: ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ವಿಫಲ ಯತ್ನ; ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರ ವಿನಂತಿ

07/07/2024, 15:43

ಮಂಗಳೂರು(reporterkarnataka.com): ನಗರದ ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿ ದುಷ್ಕರ್ಮಿ ಗಳ ಗ್ಯಾಂಗ್ ನಿಂದ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.


5- 6 ಮಂದಿ ಇದ್ದ ಕಳ್ಳರ ತಂಡ ಮನೆಯ ಅವರಣದೊಳಗೆ‌ ನುಗ್ಗಿ ಕಿಟಕಿಯ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿತ್ತು. ಕಳ್ಳತನಕ್ಕೆ ಯತ್ನಿಸುವ ಸಿಸಿ ಕ್ಯಾಮೆರಾ ದೃಶ್ಯ ಇದೀಗ ವೈರಲ್ ಆಗುತ್ತಿದೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕರು ಈ ಕುರಿತು ಜಾಗ್ರತೆ ವಹಿಸಬೇಕು. ಗುಮಾನಿ ಆಸಾಮಿಗಳು ಪರಿಸರದಲ್ಲಿ ಅಥವಾ ಆಸುಪಾಸಿನಲ್ಲಿ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ನಂಬರ್ 9480802321 ಗೆ ಅಥವಾ 112 ಗೆ ಮಾಹಿತಿ ನೀಡಬೇಕು. ಮನೆಗಳಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಹಾಗೂ ಪ್ರವೇಶ ದಾರಿ ಕಾಣುವ ಹಾಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದು ಮತ್ತು ಅವುಗಳು ಸುಸ್ಥಿತಿಯಲ್ಲಿರುವ ಬಗ್ಗೆ, ರಾತ್ರಿಯ ದೃಶ್ಯಗಳು ಸ್ಪಷ್ಟವಾಗಿ ಕಾಣುವ ಹಾಗೆ ಮತ್ತು ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು