3:41 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ವೆಚ್ಚದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ

06/02/2023, 13:35

ಸುರತ್ಕಲ್(reporterkarnataka.com): ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ರೂ. ಅನುದಾನದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ರೇಚಕ ಸ್ಥಾವರಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಜರುಗಿತು.

ಭೂಮಿಪೂಜೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು, “ಕ್ಷೇತ್ರಕ್ಕೆ 2000 ಕೋಟಿ ರೂ. ಅನುದಾನ ತರುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಇಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಸೆಜ್ ಅಧಿಕಾರಿಗಳು ಹಣವಿಲ್ಲ ಎಂದು ಕೈ ಎತ್ತಿದ್ದರು. ಈ ವೇಳೆ ಅವರೊಂದಿಗೆ ಮಾತುಕತೆ ನಡೆಸಿ ನೀವು ಜಗವನ್ನಾದರೂ ಬಿಟ್ಟಿಕೊಡಿ ಎಂದಿದ್ದಕ್ಕೆ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ. ಈ ಭಾಗದ ಜನರು ಬಹುಕಾಲದ ಬೇಡಿಕೆಯಾದ ತ್ಯಾಜ್ಯ ನಿರ್ವಹಣಾ ಘಟಕ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದೆ” ಎಂದರು.


ಪ್ರಾಸ್ತಾವಿಕ ಮಾತಾಡಿದ ಕಾರ್ಪೋರೇಟರ್ ವರುಣ್ ಚೌಟ ಅವರು, “ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 2000 ಕೋಟಿ ರೂ. ಅನುದಾನವನ್ನು ತಂದು ಪ್ರತಿನಿತ್ಯ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಈ ಭಾಗದ ಶಾಸಕರು ಅಭಿನಂದನಾರ್ಹರು. ಇಂತಹ ನಾಯಕನ ಜೊತೆಗೆ ಕೆಲಸ ಮಾಡಲು ನಾವು ಹೆಮ್ಮೆ ಪಡುತ್ತೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಹರ್ನಿಶಿ ದುಡಿಯುತ್ತಿರುವ ಶಾಸಕರಿಗೆ ನಾವೆಂದೂ ಚಿರಋಣಿ” ಎಂದರು.
ವೇದಿಕೆಯಲ್ಲಿ ಕಾರ್ಪೋರೇಟರ್ ಗಳಾದ ವರುಣ್ ಚೌಟ, ವೇದಾವತಿ, ರಾಘವೇಂದ್ರ ಕುಡ್ವ, ವಿಜಯ್ ಅಮೀನ್, ಭಾಗ್ಯಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು