2:35 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕೊಡಿಯಾಲಬೈಲ್ ವಾರ್ಡ್: 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

20/01/2023, 22:46

ಮಂಗಳೂರು(reporterkarnataka.com) ಮಹಾನಗರ ಪಾಲಿಕೆಯ ಕೊಡಿಯಾಲಬೈಲ್ ವಾರ್ಡಿನ ಶ್ರೀದೇವಿ ಕಾಲೇಜಿನ ಬಳಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಬಲ್ಲಾಳ್ ಭಾಗ್ ಶ್ರೀದೇವಿ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಮುಖ್ಯರಸ್ತೆ ಸಂಪರ್ಕಿಸುವ ರಸ್ತೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರ ಬೇಡಿಕೆಯಂತೆ ರಸ್ತೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಂಡಿದ್ದು ಸ್ಥಳೀಯರ ಸಹಕಾರದಿಂದ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವ ಭರವಸೆಯಿದೆ ಎಂದು ಹೇಳಿದರು.

ಸ್ಥಳೀಯ ಕಾರ್ಪೋರೇಟರ್ ಸುಧೀರ್ ಶೆಟ್ಟಿ ಮಾತನಾಡಿ,ಕೊಡಿಯಾಲಬೈಲ್ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕರ ಕೊಡುಗೆ ಅಪಾರವಾಗಿದೆ. ಜನರ ಬೇಡಿಕೆಗಳಿಗೆ ತ್ವರಿತವಾಗಿ‌ ಸ್ಪಂದಿಸುವ ಮೂಲಕ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಸದಾ ಸಹಕಾರ ನೀಡುತಿದ್ದಾರೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ‌ ಕಾವಾ, ಕಿಶೋರ್ ಕೊಟ್ಟಾರಿ, ಮುಖಂಡರಾದ ಗಂಗಾಧರ್, ಚಂದ್ರಶೇಖರ್, ಲೋಕನಾಥ್ ಶೆಟ್ಟಿ, ಪ್ರಶಾಂತ್ ಆಳ್ವ, ಜಗನಾಥ ಶೆಟ್ಟಿ, ಭಾರತೀ ಶೆಟ್ಟಿ, ಯಶವಂತ್ ಕುದ್ರೋಳಿ, ವಿವೇಕ್ ದೇವಾಡಿಗ, ವಸಂತ್ ಜೆ. ಪೂಜಾರಿ, ಸದಾಶಿವ ಕುಲಾಲ್, ನವೀನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು