12:57 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ: ಅಥಣಿ ಶಾಸಕ ಮಹೇಶ ಕುಮಟಳ್ಳಿ ಚಾಲನೆ

06/03/2023, 15:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಶಾಸಕ ಮಹೇಶ್ ಕುಮಟಳ್ಳಿ ಅವರು
ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಯಡಿಯಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಯ ಗುರಿಯನ್ನು ಇಟ್ಟುಕೊಂಡು ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದರು.

ಮೊದಲನೆಯದಾಗಿ ದೇಸಾರಟ್ಟಿ ಗ್ರಾಮದಲ್ಲಿ ಸುಮಾರು 1.60 ಕೋಟಿ ರೂ. ಗಳ ದೇಸಾರಟ್ಟಿ ಕೊಕಟನೂರ ರಸ್ತೆ ಕಾಮಗಾರಿ ಭೂಮಿ ಪೂಜೆ. 50 ಲಕ್ಷ ರೂ ವೆಚ್ಚದಲ್ಲಿ ಕೊಕಟನೂರ ಗ್ರಾಮದ ಎಸ್ ಸಿ ಕಾಲೋನಿ ಚರಂಡಿ ಭೂಮಿ ಪೂಜೆ. ಎರಡು ಕೋಟಿ ಹನ್ನೊಂದು ಲಕ್ಷರು ವೆಚ್ಚದಲ್ಲಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಕಾಮಗಾರಿಯ ಭೂಮಿ ಪೂಜೆ. ಕರಿಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನ ಕಟ್ಟಡಕ್ಕೆ 5 ಲಕ್ಷ ರೂಗಳ ಭೂಮಿ ಪೂಜೆ. ಒಂದು ಕೋಟಿ ರೂ ವೆಚ್ಚದಲ್ಲಿ ಹಿರೇಹಳ್ಳಕ್ಕೆ ಬ್ರಿಜ್ ಕಂ ಬಾಂಧಾರ ನಿರ್ಮಾಣ ಭೂಮಿ ಪೂಜೆ. 5 ಲಕ್ಷ ರೂ ವೆಚ್ಚದಲ್ಲಿ ಅಪ್ಪಯ್ಯ ಸ್ವಾಮಿ ದೇವಸ್ಥಾನದ ಸಮುದಾಯ ಭವನದ ಭೂಮಿ ಪೂಜೆ ಎರಡು ಕೋಟಿ ರೂ ವೆಚ್ಚದಲ್ಲಿ ಕೋಕಟನೂರ ಸುಟ್ಟಟ್ಟಿ ರಸ್ತೆ ಕಾಮಗಾರಿ ಭೂಮಿ ಪೂಜೆ. 14 ಲಕ್ಷ ರೂಗಳ ಒಂದು ಪ್ರಾಥಮಿಕ ಶಾಲಾ ಕೊಠಡಿ ಭೂಮಿ ಪೂಜೆ. ಸುಮಾರು 3 ಕೋಟಿ ವೆಚ್ಚದಲ್ಲಿ ಕೊಕಟನುರ ತುಂಗಳ ರಸ್ತೆ ಕಾಮಗಾರಿ ಭೂಮಿ ಪೂಜೆ. 3 ಕೋಟಿ 50 ಲಕ್ಷ ರೂಗಳ ವೆಚ್ಚದಲ್ಲಿ ಎಲ್ಲಮವಾಡಿ ಝಜರವಾಡ ರಸ್ತೆ ಕಾಮಗಾರಿ ಭೂಮಿ ಪೂಜೆ. ಒಂದು ಕೋಟಿ 38 ಲಕ್ಷ ರೂಗಳ ವೆಚ್ಚದಲ್ಲಿ ಕಕಮರಿ ಗ್ರಾಮದಲ್ಲಿ ಧೋನಿ ಹಳ್ಳಕ್ಕೆ ಅಡ್ಡಲಾಗಿ ಬಾಂಧರ ನಿರ್ಮಾಣ ಕಾಮಗಾರಿ ಭೂಮಿ ಪೂಜೆ. ಗ್ರಾಮದಲ್ಲಿ ಸುಮಾರು 95 ಲಕ್ಷ ರೂಗಳ ವೆಚ್ಚದಲ್ಲಿ ಹಿರೇಹಳ್ಳಕ್ಕೆ ಬಾಂಧಾರ ಸಹಿತ ಸೇತುವೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ. ಸುಮಾರು 16 ಕೋಟಿ 93 ಲಕ್ಷ ರೂಗಳ ಭೂಮಿ ಪೂಜೆಯನ್ನು ತಾಲೂಕಿನ ಸಮಗ್ರ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡ ಮಹೇಶ್ ಕುಮಟಳ್ಳಿ .


ನಂತರ ಮಾತನಾಡಿದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಧ್ಯಯವಾಗಿದೆ ಈಗಾಗಲೇ ಕೊಕಟನೂರು ಹಲವಾರು ಬೇಡಿಕೆಗಳನ್ನು ಈಡೇರಿಸಲಾಗಿದ್ದು ಮುಂಬರುವ ದಿನಗಳಲ್ಲಿಯೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಈ ಭಾಗದಲ್ಲಿ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತೇನೆ ಎಂದರು.
ಇದೆ ವೇಳೆಯಲ್ಲಿ ಸಿದ್ದಪ್ಪಾ ಮುದಕ್ಕಣ್ಣವರ. ಕುಮಾರ ವಿರಗೌಡ. ರವಿ ದೊಡ್ಡಮನಿ. ಸುಟ್ಟಟ್ಟಿ ಗ್ರಾಮಸ್ಥರಾದ ಹಣಮಂತ ಅರ್ದಾವುರ. ಸಾಬು ಮಾಳಿ. ಭೀಮಪ್ಪ ಆಸಂಗಿ. ಮಂಜುನಾಥ ಅಂಬಾಜಿ. ಸಂಬಾಜಿ ಗೂರ್ಲಾಪೂರ್ ದಾನಪ್ಪ ಮಲಬಾದಿ. ಗುತ್ತಿಗೆಗಾರರಾದ ತಿಪ್ಪಣ್ಣ ಭಜಂತ್ರಿ ಹಾಗೂ ಸ್ಥಳೀಯ ಗ್ರಾಮಸ್ಥರು ಹಾಗೂವಿವಿಧ ಇಲಾಖೆಯ ಅಧಿಕಾರಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು