10:38 PM Tuesday18 - March 2025
ಬ್ರೇಕಿಂಗ್ ನ್ಯೂಸ್
Farmers Loan | ಅರ್ಹತೆ ಇರುವ ರೈತ ಫಲಾನುಭಗಳಿಗೆ ಸಾಲ ಸೌಲಭ್ಯ: ವಿಧಾನ… ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ… Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ… ಯುವನಿಧಿ ಯೋಜನೆ; ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರಕ್ಕೆ ಕ್ರಮ: ಸಚಿವ ಡಾ. ಶರಣಪ್ರಕಾಶ್… Education | ದೈಹಿಕ ಶಿಕ್ಷಕರ ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಪರಿಶೀಲನೆ: ಶಿಕ್ಷಣ… Solar power & Wind power | ಸೌರ ಶಕ್ತಿ ಮತ್ತು ಪವನ… Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ… KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು,… Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ:… ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ:…

ಇತ್ತೀಚಿನ ಸುದ್ದಿ

ಕೋಲಾರ: ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗದ ಭರವಸೆ

18/03/2025, 22:37

ಬೆಂಗಳೂರು (reporterkarnataka.com): ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ.ಎಲ್.ಅನಿಲ್‍ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿಯಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಾಲೂಕುಗಳಲ್ಲಿ ಬಿಜಿಎಂಎಲ್ ವ್ಯಾಪ್ತಿಯಲ್ಲಿ 12,335.51 ಎಕರೆ ಹಾಗೂ ಬಿಇಎಂಎಲ್ ವ್ಯಾಪ್ತಿಯಲ್ಲಿ 1846 ಎಕರೆ ಜಮೀನಿರುತ್ತದೆ. ಬಿಜಿಎಂಎಲ್ ಹಾಗೂ ಬಿಇಎಂಎಲ್ ಸಂಸ್ಥೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ತಿಳಿಸಿದರು.
ಬಿಇಎಂಎಲ್ ಗೆ ನೀಡಿದ 1846 ಎಕರೆ ಜಮೀನಿನಲ್ಲಿ ಸಂಸ್ಥೆಯು ತನ್ನ ಉದ್ದೇಶಿತ ಕಾರ್ಯ ಚಟುವಟಿಕೆಗಳಿಗಾಗಿ ಉಪಯೋಗಿಸಿಕೊಂಡು ಸಂಸ್ಥೆಗೆ ಅವಶ್ಯವಿಲ್ಲದ 967.20 ಜಮೀನನ್ನು ಹೆಚ್ಚುವರಿ ಜಮೀನೆಂದು ನಿರ್ಧರಿಸಿ ಸರ್ಕಾರವು ಹಿಂತೆಗೆದುಕೊಂಡಿದೆ. ಬಿಜಿಎಂಎಲ್‍ನಿಂದ ಯಾವುದೇ ಜಮೀನನ್ನು ಹಿಂತೆಗೆದುಕೊಂಡಿರುವುದಿಲ್ಲ. ಬಿಇಎಂಎಲ್ ನಿಂದ ಹಿಂತೆಗೆದುಕೊಡ ಜಮೀನಿನ ಪೈಕಿ 658.20 ಎಕರೆ ಜಮೀನನ್ನು ಕೆಐಡಿಬಿಗೆ ಮಂಜೂರು ಮಾಡಲಾಗಿದೆ. ಕೆಐಡಿಬಿ ಯಿಂದ ಇಲ್ಲಿಯವರೆಗೆ ಯಾವುದೇ ಕಂಪನಿಗೆ ಹಂಚಿಕೆ ಮಾಡಿರುವುದಿಲ್ಲ. ಹಂಚಿಕೆ ದರ ನಿಗದಿ ಸಂಬಂಧ ಮಂಡಳಿಯ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು