6:20 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನ: ಅನುದಾನ ನೀಡಲು ಕೇಂದ್ರ ಸಚಿವರಿಗೆ ವೈಎಎನ್ ಮನವಿ

11/08/2021, 08:24

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಅಂತರ್ಜಲ1200 ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನಕ್ಕೆ ತಗಲುವ 500 ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಸಚಿವ ಮಾಧುಸ್ವಾಮಿ ಹಾಗೂ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಚಿವ ಮಾಧುಸ್ವಾಮಿ ಅವರೊಂದಿಗೆ ನಿಯೋಗದಲ್ಲಿ ತೆರಳಿದ್ದ ವೈಎಎನ್ ಅವರು , ಕೇಂದ್ರ ಸಚಿವರಿಗೆ ಮನವಿ ಮಾಡಿ , ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ 1200 ಅಡಿಗಳಿಗೆ ದಾಟಿದೆ , ಕೊಳವೆಬಾವಿಗಳಲ್ಲಿ ಸಿಗುವ ನೀರು ಪೈರೈಡ್ ಮಿಶ್ರಿತವಾಗಿದ್ದು , ಜನರ ಬದುಕು ದುಸ್ತರವಾಗಿದೆ ಎಂದು ತಿಳಿಸಿದರು. 

ಈಗಾಗಲೇ ಬೆಂಗಳೂರು ನಗರದ ತ್ಯಾಜ್ಯ ನೀರು ಕೆಸಿ ವ್ಯಾಲಿ ಮೊದಲನೇ ಹಂತದ ಯೋಜನೆ ಮೂಲಕ ಕೋಲಾರ ಜಿಲ್ಲೆಯ ಹಲವಾರು ಕೆರೆಗಳಿಗೆ ತುಂಬಿಸಲಾಗಿದ್ದು , ಇದರಿಂದ ಕೆರೆಗಳಿಗೆ ನೀರು ತುಂಬಿದ ಜಾಗದಲ್ಲಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಕೆಸಿ ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಹರಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದ್ದು , ಕೃಷಿಯನ್ನೇ ನಂಬಿದ ಜನರ ಬದುಕು ಹಸನಾಗಲಿದೆ ಎಂದು ತಿಳಿಸಿದರು . 

ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರಕ್ಕೆ ಹರಿಸಲಾಗುತ್ತಿದ್ದು , 2ನೇ ಹಂತದ ಯೋಜನೆ ಆನು ನಿನಗಂಡರೆ ಮತ್ತಷ್ಟು ಕರಗಳಿಗೆ ನೀರು ಹರಿಸುವುದರಿಂದ ಜಳ ಹಸಿರಾಗಲಿದೆ ಎಂದ ಅವರು , ಈಗಾಗಲೇ ಈ ಸಂಬಂಧ ಯೋಜನೆ ತಯಾರಾಗಿದ್ದು , ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಕೋರಿದರು . ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಗಜೇಂದ್ರಸಿಂಗ್ ಷೇಖಾವತ್ , ಅನುದಾನ ಒದಗಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಶೋಭಾ ಕರಂದ್ಲಾಜೆ , ಎ.ನಾರಾಯಣಸ್ವಾಮಿ. ಭಗವಂತ್ ಕೂಬಾ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು