2:26 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯಲ್ಲಿ ಇನ್ನು 3 ದಿನ ಕಠಿಣ ಲಾಕ್ ಡೌನ್ ನಿಯಮ ಜಾರಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

20/05/2021, 17:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರ ಜಿಲ್ಲೆಯಲ್ಲಿ ನಾಳೆ, ಅಂದರೆ ಮೇ 21, 2021 ಸಂಜೆ 6.00 ಗಂಟೆಯಿಂದ ಮೇ 25, 2021 ಬೆಳಿಗ್ಗೆ 6.00 ಗಂಟೆ ವರೆಗೆ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳು ಕಠಿಣಗೊಳಿಸಲಾಗಿದ್ದು, ಪೆಟ್ರೋಲ್, ಹಾಲು, ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ವಾಣಿಜ್ಯ ವ್ಯವಹಾರಗಳನ್ನು  ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆರ್ ಸೆಲ್ವಮಣಿ ತಿಳಿಸಿದ್ದಾರೆ.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿದ್ದರೂ ಬೆಳಗ್ಗೆ 6.00 ರಿಂದ ಸಂಜೆ 6.00ರವರೆಗೆ ಜನಸಂದಣಿ ಸೇರಿರುವ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಚೈನ್ ಮುರಿಯುವ ಉದ್ದೇಶದಿಂದ ಜಿಲ್ಲಾಡಳಿತವು ಲಾಕ್ ಡೌನ್ ನಿಮಗಳನ್ನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ ಎಂದು ಹೇಳಿದರು.

ಅಂಗಡಿಗಳಲ್ಲಿ ದಿನಸಿ, ತರಕಾರಿ ಹಾಗೂ ಇನ್ನಿತರೆ ಅಗತ್ಯ ವಸ್ತುಗಳ ಮಾರಾಟಕ್ಕೆ ಈಗ ಬೆಳಿಗ್ಗೆ 6.00 ರೊಂದ 10.00ರವರೆಗೆ ಅವಕಾಶವಿತ್ತು. ಅದನ್ನು ಇನ್ನು ಮೂರು ದಿನಗಳ ಕಾಲ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಾಳೆ ಸಂಜೆವರೆಗೂ ತಮಗೆ ಅಗತ್ಯವಿರುವ ವಸ್ತುಗಳ ಖರೀದಿಯನ್ನು ಮಾಡಿ ಇಟ್ಟುಕೊಳ್ಳುವಂತೆ ಜಿಲ್ಲೆಯ ಜನತೆಗೆ ಜಿಲ್ಲಧಿಕಾರಿಗಳು ಕೋರಿದರು.

ಹೋಟೆಲ್ ನಿಂದ ಆಹಾರ ಪರ್ಸೆಲ್ ತರುವುದು ಈಗ ಜಾರಿಯಿರುವಂತೆ ಮುಂದುವರೆಯಲಿದೆ ಎಂದ ಅವರು, ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಸಂಜೆ 6.00 ರವರೆಗೆ ಅವಕಾಶ ನೀಡಲಾಗಿದೆ ಎಂದರು.

ಬ್ಯಾಂಕಿಂಗ್ ಕಚೇರಿಗಳೂ ಈ ಮೂರು ದಿನ ಮುಚ್ಚಿರುತ್ತವೆ. ಆದರೆ, ಎಟಿಎಂ ವ್ಯವಸ್ಥೆ ಲಭ್ಯವಿರಲಿದೆ. ಸರ್ಕಾರಿ ಕಚೇರಿಗಳು ಈಗಾಗಲೇ ಜಾರಿಯಿರುವ ನಿಯಮದಂತೆ ಕಾರ್ಯ ಮುಂದುವರೆಸಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ ಅನಾವಶ್ಯಕ ವಾಹನ ಓಡಾಟವನ್ನು ನಿಷೇಧಿಸಲಾಗಿದೆ ಎಂದ ಅವರು ಅನಗತ್ಯ ಓಡಾಟ ಕಂಡುಬಂದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗುವುದು ಎಂದರು. ವ್ಯವಸಾಯ ಹಾಗೂ ವೈದ್ಯಕೀಯ ಸಂಬಂಧಿತ ಕೈಗಾರಿಕೆ/ಕಂಪನಿಗಳಿಗೆ ಮಾತ್ರ ಕಾರ್ಯ ನಿರ್ವಹಿಸಲು  ಅಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಯಲು ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು