1:19 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯಲ್ಲಿ ಮಟ್ಕಾ, ಬೆಟ್ಟಿಂಗ್, ಅಕ್ರಮ ಬಡ್ಡಿ ವ್ಯವಹಾರ, ಜೂಜಾಟ ಬಂದ್: ನೂತನ ಎಸ್ಪಿ ಡಿ.ದೇವರಾಜ್ 

11/01/2022, 21:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳಾದ ಮಟ್ಕಾ ದಂಧೆ , ಕ್ರಿಕೇಟ್ ಬೆಟ್ಟಿಂಗ್ , ಸಾಮಾಜಿಕ ಜಾಲತಾಣಗಳ ದುರ್ಬಳಕೆ , ಜೂಜೂಟ , ಗಾಂಜಾ , ಅಕ್ರಮ ಮರಳು ಸಾಗಾಣಿಕೆ , ಅಕ್ರಮ ಗಣಿಗಾರಿಕೆ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಹೇಳಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.

ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಗಳು ಬಗೆಹರಿಯದಿದ್ದರೆ, ತಾವುಗಳು ಧೈರ್ಯವಾಗಿ ನಮ್ಮ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

 ಜೂಜಿಗೆ ದಾಸರಾಗಿ ನಿಮ್ಮ ಮಕ್ಕಳ ವಿದ್ಯಾಭಾಸ್ಯಕ್ಕೆ ದಕ್ಕೆ ಉಂಟು ಮಾಡಬೇಡಿ. ಯಾವುದೇ ರೀತಿಯ ಪ್ರತಿಭಟನೆಗಳು , ಸಂಘಟನೆ ಮಾಡುವುದಾದರೆ ಅದಕ್ಕೆ ಸೂಕ್ತ ರೀತಿಯಲ್ಲಿ ಪೊಲೀಸ್ ಅನುಮತಿಯನ್ನು ಪಡೆಯಬೇಕು . ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು . ಸಾಮಾಜಿಕ ಜಾಲತಾಣಗಳ ದುರ್ಬಳಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು . ವಾಟ್ಸ್ ಆಫ್ ಗುಂಪಿನಲ್ಲಿ ಯಾವುದೇ ವ್ಯಕ್ತಿಯ ವಿರುದ್ಧ ಮಾನಹಾನಿ ಪೋಸ್ಟ್ ಮಾಡಿದರೆ ಗುಂಪಿನ ಆಡ್ಮಿನ್‌ಗಳನ್ನು ಹೊಣೆ ಮಾಡಲಾಗುತ್ತದೆ ಎಂದು ತಿಳಿಸಿದರು. 

ವಾಹನಗಳ ಮೇಲೆ ಯಾವುದೇ ಸಂಘಟನೆಯ ಹೆಸರು ಮುಂತಾದವುಗಳನ್ನು ಆರ್.ಟಿ.ಓ ನಿಂದ ಅನುಮತಿ ಇಲ್ಲದೆ ಬಳಸಿಕೊಳ್ಳುವಂತಿಲ್ಲ. ಇದು ಕಾನೂನು ಬಾಹಿರ. ಗ್ರಾಮೀಣ ಪ್ರದೇಶಗಳ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಕುರಿತು ಅಬಕಾರಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಅಕ್ರಮ ಮದ್ಯ ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿ ಮಧ್ಯವನ್ನು ವಶಪಡಿಸಿಕೊಂಡು ಲೇಬಲ್ ಸಂಖ್ಯೆ ಆಧಾರದ ಮೇಲೆ ಸಂಬಂಧ ಪಟ್ಟ ಬಾರ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳು ದಂದೆಯನ್ನು ನಿಲ್ಲಿಸಲಾಗುವುದು. ಜಿಲ್ಲೆಯಲ್ಲಿ ಎಲ್ಲಾ ಪೊಲೀಸ್ ಠಾಣೆಗಳಿಗೆ ಬಿಳಿ ಬಣ್ಣ ಹೊಡಿಸಲಾಗುವುದು. ಬಡ್ಡಿ ವ್ಯವಹಾರ ನಡೆಸುವವರು ಪರವಾನಿಗಿ ಹೊಂದಿದ್ದರೂ ಪರಿಶೀಲನೆ ನಡೆಸಿ ಅಕ್ರಮ ಬಡ್ಡಿ ವ್ಯವಹಾರವನ್ನು ತಡೆಯಲಾಗುತ್ತದೆ ಎಂದು ತಿಳಿಸಿದರು. 

ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಗೆ ಸರಿಯಾಗಿ ಪೊಲೀಸ್ ಅಧಿಕಾರಿಗಳು ಸ್ಪಂದಿಸದಿದ್ದರೆ ನನ್ನ ದೂರವಾಣಿ ಸಂಖ್ಯೆ 9480802601 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಚಿನ್ ಘೋರ್ಪಡೆ ಅವರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು