ಇತ್ತೀಚಿನ ಸುದ್ದಿ
ಕೋಲಾರ: ಕಸಬಾ ರೇಷ್ಮೆ ಬೆಳಗಾರರ ಹಾಗೂ ರೈತ ಸೇವಾ ಸಹಕಾರ ಸಂಘ ಅಧ್ಯಕ್ಷರ ಚುನಾವಣೆ ಮುಂದೂಡಿಕೆ
07/11/2024, 20:34
ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com
ಶ್ರೀನಿವಾಸಪುರದ ಕಸಬಾ ರೇಷ್ಮೆ ಬೆಳಗಾರರ ಹಾಗೂ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಅಯ್ಯಪ್ಪ ನಿಧನದಿಂದ ತೆರವಾದ ಖಾಲಿಯಾಗಿರುವ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.
ಚುನಾವಣೆ ನಡೆಸಲು ನ.7ರಂದು ದಿನ ನಿಗದಿ ಮಾಡಲಾಗಿತ್ತು. ಆದರೆ ನಿಗದಿತ ಸಮಯಕ್ಕೆ ಯಾರು ನಾಮಪತ್ರ ಸಲ್ಲಿಸಿದ ಕಾರಣ ಚುನಾವಣೆಯ ಪಕ್ರಿಯೆಯನ್ನು ಇಲಾಖೆಯ ಸೂಚನೆಯಂತೆ ಮುಂದೂಡಲಾಗಿದೆ ಎಂದು ಚುನಾವಣಾಧಿಕಾರಿ ಎಂ.ಐ. ಅಬೀದ್ ಹುಸೇನ್ ಮಾಹಿತಿ ನೀಡಿದ್ದಾರೆ.