12:34 PM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ, ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಲು ಆಗ್ರಹ

18/09/2021, 09:11

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸುವ ಜತೆಗೆ ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ರೈತ ಸಂಘದಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ಚಂದನ್‍ಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ 1ನೇ, 2ನೇ ಅಲೆಗಳಿಂದ ತತ್ತರಿಸಿದ್ದ ಜನರು ಇದೀಗ ಕೊಂಚ ಮಟ್ಟಿಗೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಈಗಾಗಲೇ ತಜ್ಞರು ನೀಡಿರುವ ಮೂರನೇ ಅಲೆಗೆ ಸಂಬಂಧಿಸಿದ ವರದಿಯು ಎಚ್ಚರಗೊಳಿಸುತ್ತಿದೆ.

ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿರುವುದಾಗಿ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವೈರಲ್ ಫೀವರ್ ಮಕ್ಕಳಲ್ಲಿ ಕಾಣಿಸಿಕೊಂಡಿರುವುದು ಪೋಷಕರಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ ಎಂದು ತಿಳಿಸಿದರು.

ಈಗಾಗಲೇ ನೂರಾರು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಆರೋಗ್ಯ ಇಲಾಖೆಯಿಂದ ಯಾವುದೇ ಕ್ರಮಕೈಗೊಳ್ಳದೇ ಇರುವುದು ಖಂಡನೀಯವಾಗಿದ್ದು, ಕೂಡಲೇ ವಿಶೇಷ ವೈದ್ಯರ ತಂಡವನ್ನು ರಚಿಸಿ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇನ್ನು ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‍ಗಳ ಹಾವಳಿ ಬಗ್ಗೆ ಸಾಕಷ್ಟು ಬಾರಿ ಮನವಿ ಮೂಲಕ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಗಡಿ ಭಾಗಗಳಲ್ಲಂತೂ ಪರಿಸ್ಥಿತಿ ಹೇಳತೀರದಾಗಿದ್ದು, ಜನರ ಜೀವಗಳ ಜೊತೆ ಚೆಲ್ಲಾಟವಾಡುತ್ತಿದ್ದರೂ ಸಂಬಂಧಪಟ್ಟ ಇಲಾಖೆಯವರು ಮೌನಕ್ಕೆ ಶರಣಾಗಿರುವುದು ಸರಿಯಲ್ಲ.

ಈಗಾಗಲೇ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯಿಂದ ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರು ವಿಧಿಯಿಲ್ಲದೆ ನಕಲಿ ಕ್ಲಿನಿಕ್‍ಗಳ ಮೊರೆ ಹೋಗಬೇಕಾಗಿದೆ. ಹೀಗಾಗಿ ವಿಶೇಷ ವೈದ್ಯರ ತಂಡ ರಚನೆ ಮಾಡುವ ಜೊತೆಗೆ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಿ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಾ.ಚಂದನ್, ತಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ವಕ್ಕಲೇರಿ ಹನುಮಯ್ಯ, ಮಂಗಸಂದ್ರ ನಾಗೇಶ್, ತಿಮ್ಮಣ್ಣ, ಮಾಲೂರು ತಾಲೂಕು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಬೂದಿಕೋಟೆ ಅಧ್ಯಕ್ಷ ನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು